ನ್ಯೂಯಾರ್ಕ್, ಮೇ. 04: ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ಆಯ್ಕೆಯಾಗಿದ್ದಾರೆ
ವಿಶ್ವಬ್ಯಾಂಕ್ನ 25 ಸದಸ್ಯರ ಕಾರ್ಯನಿರ್ವಾಹಕ ಮಂಡಳಿಯು ಬುಧವಾರ ಮಾಸ್ಟರ್ಕಾರ್ಡ್ ಮಾಜಿ ಸಿಇಒ ಅಜಯ್ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಮಾಸ್ಟರ್ಕಾರ್ಡ್ನ ಮಾಜಿ ಸಿಇಒ ಮತ್ತು ಭಾರತ ಮೂಲದ ಅಜಯ್ ಬಂಗಾ ಹೆಸರನ್ನು ವಿಶ್ವಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಈ ಹಿಂದೆ ಹೇಳಿದ್ದರು.
ವಿಶ್ವಬ್ಯಾಂಕ್ನ ಮುಖ್ಯಸ್ಥರಾಗಿದ್ದ ಡೇವಿಡ್ ಮಾಲ್ಪಾಸ್ ಶೀಘ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬಳಿಕ ಯುಎಸ್ ಅಧ್ಯಕ್ಷ ಫೆಬ್ರವರಿ ಅಂತ್ಯದಲ್ಲಿ ವಿಶ್ವ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾರನ್ನು ಶಿಫಾರಸು ಮಾಡಿದ್ದರು.