ಸುದ್ದಿಮೂಲ ವಾರ್ತೆ
ಬೆಂಗಳೂರು, ಏ,18: ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ ಮೂರ್ತಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿರುವ ಫ್ರೇಜರ್ಟೌನ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಕೆ ಮಾಡಿದರು.
ಕಾಂಗ್ರೆಸ್ನ ಹಾಲಿ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕಾಂಗ್ರೆಸ್ ಇದುವರೆಗೂ ಟಿಕೆಟ್ ಘೋಷಿಸದ ಕಾರಣ ಅವರು ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.