ಸುದ್ದಿಮೂಲ ವಾರ್ತೆ ಬೀದರ್, ಡಿ.02:
ಅಕ್ಕ ಕೆೆ ಮಹಿಳಾ ಸಬಲೀಕರಣಕ್ಕೆೆ ದಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ ಕಛೇರಿ ಆವರಣದಲ್ಲಿ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆೆ , ಕೌಶಲ್ಯಾಾಭಿವೃದ್ಧಿಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಬೀದರ ಇವರ ಸಂಯುಕ್ತಾಾಶ್ರಯದಲ್ಲಿ ಅಕ್ಕ ಕೆೆ ಉದ್ಘಾಾಟಿಸಿ ಮಾತನಾಡಿದರು. ಸಂಪೂರ್ಣವಾಗಿ ಮಹಿಳೆಯರಿಂದ ಕಾರ್ಯ ನಿರ್ವಹಿಸುವ ಅಕ್ಕ ಕೆೆ ಮಹಿಳಾ ಸಬಲೀಕರಣದ ಒಂದು ಭಾಗವಾಗಿದೆ. 12 ಲಕ್ಷ ಸರ್ಕಾರದ ನೆರವು ಹಾಗೂ ಕೆೆ ನಡೆಸಿಕೊಂಡು ಹೋಗಲು ಮಹಿಳಾ ಸ್ವಸಹಾಯ ಸಂಘಗಳ ಬಂಡವಾಳ ಹಾಕಿ ಕೆೆ ನಡೆಸಿಕೊಂಡು ಹೋಗುವುದು. ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದು ಮತ್ತು ಮುಖ್ಯ ವಾಹಿನಿಗೆ ತರುವುದು ಈ ಕೆೆಯ ಮುಖ್ಯ ಉದ್ದೇಶವಾಗಿದೆ ಎಂದರು. ಮಹಿಳೆಯರ ಉದ್ಯಮಶೀಲತೆ ಹೆಚ್ಚಿಿಸಿ , ಅವರು ಸ್ವಾಾವಲಂಬಿ ಬದುಕು ಕಟ್ಟಿಿಕೊಳ್ಳಲು ಅಕ್ಕ ಕೆೆ ನೆರವಾಗಲಿದೆ ಎಂದರು.
ತಮ್ಮ ಸರ್ಕಾರ ಯಾವುದೇ ಮಧ್ಯವರ್ತಿಗಳಿಲ್ಲದೆ ಗೃಹ ಲಕ್ಷ್ಮೀ ಯೋಜನೆಯಡಿ ನೇರವಾಗಿ ಮಹಿಳೆಯರ ಖಾತೆಗೆ 2000 ರೂಪಾಯಿ ಹಾಕುವುದರ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಲು ಕ್ರಮ ಕೈಗೊಳ್ಳಲಾಗುತ್ತಿಿದೆ. ಈ ಯೋಜನೆಗೆ ಪ್ರತಿ ವರ್ಷ 30,000 ಕೋಟಿ ರೂಪಾಯಿ 1.26 ಕೋಟಿ ಮಹಿಳೆಯರಿಗೆ ನೀಡಲಾಗುತ್ತಿಿದೆ ಹಾಗೂ ಶಕ್ತಿಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿ, ಟಿಕೆಟ್ ಹಣ ಉಳಿತಾಯ ಮಾಡಿಕೊಳ್ಳುತ್ತಿಿದ್ದಾರೆ. ಇವರಿಗೆ 600 ಕೋಟಿ ಟಿಕೆಟ್ ಮಹಿಳೆಯರಿಗೆ ಉಚಿತವಾಗಿ ನೀಡಲಾಗಿದೆ ಎಂದರು. ಕೆೆಯಲ್ಲಿ ಗುಣಮಟ್ಟದ ಮತ್ತು ರುಚಿಕರವಾದ ಆಹಾರ ಹಾಗೂ ಸ್ವಚ್ಛತೆಯಿಂದ ನೋಡಿಕೊಳ್ಳಬೇಕು ಎಂದರು.
ಬೀದರ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಾಳೆ ಅವರು ಮಾತನಾಡಿ, ಅಕ್ಕ ಕೆೆ ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಲು ಹಾಗೂ ಉದ್ಯಮಶೀಲತೆ ಹೆಚ್ಚಿಿಸುವುದಾಗಿದೆ. ಕೆೆಯಲ್ಲಿ ವಿಶೇಷ ಹಾಗೂ ವಿವಿಧ ಬಗೆಯ ಭೋಜನ ವ್ಯವಸ್ಥೆೆ ಮಾಡಬೇಕು. ರಾಷ್ಟ್ರೀಯ ಜೀವನೋಪಾಯ ಯೋಜನೆಯಡಿ ಕೇಂದ್ರ ಸರ್ಕಾರದಿಂದ 60% ಹಾಗೂ ರಾಜ್ಯ ಸರ್ಕಾರದಿಂದ 40% ಹಣವನ್ನು ಇದಕ್ಕೆೆ ನೀಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ ಮಾತನಾಡಿ, ಅಕ್ಕ ಕೆೆ ಮೂಲಕ ಮಹಿಳೆಯರನ್ನು ಇನ್ನಷ್ಟು ಆರ್ಥಿಕ ಸದೃಢರಾಗಿಸಲು ಹಾಗೂ ಮಹಿಳಾ ಉದ್ಯಮಶೀಲತೆ ಹೆಚ್ಚಿಿಸುವುದು ಈ ಕೆೆಯ ಮುಖ್ಯ ಉದ್ದೇಶವಾಗಿದೆ. ಎರಡನೇ ಕೆೆ ಹುಮನಾಬಾದನಲ್ಲಿ ಆರಂಭದ ಹಂತದಲ್ಲಿದೆ. ಈ ಕೆಯಲ್ಲಿ ಆನ್ಲೈನ್ ಯುಪಿಆಯ್ (ಖಿಐ) ಮೂಲಕ ಕೂಡ ಪಾವತಿ ಮಾಡಬಹುದಾಗಿದೆ. ಈ ಸಂದರ್ಭದಲ್ಲಿ ಸಚಿವರು ಬಗದಲನ ಗಣೇಶ ಸ್ವಸಹಾಯ ಸಂಸ್ಥೆೆಗೆ ಕೆೆಯ ಪರವಾನಗಿ ನೀಡಿದರು ಹಾಗೂ ಕೆೆ ಉಪಾಹಾರ ಸೇವಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ್ , ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿಿ , ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶಿವಯ್ಯ ಸ್ವಾಾಮಿ, ಬೀದರ ತಾಲೂಕು ಪಂಚಾಯತ ಇಓ ಮಾಣಿಕರಾವ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿಿತರಿದ್ದರು.
ಅಕ್ಕ ಕೆ ಮಹಿಳಾ ಸಬಲೀಕರಣಕ್ಕೆ ದಾರಿಯಾಗಲಿದೆ – ಸಚಿವ ಈಶ್ವರ ಖಂಡ್ರೆ

