ಸುದ್ದಿಮೂಲ ವಾರ್ತೆ,
ಮೈಸೂರು, ಜೂ.26: ಸಣ್ಣ ನೀರಾವರಿ ಇಲಾಖೆಯ ಎಲ್ಲಾ ಕಾಮಗಾರಿ ಗಳು ನಿಗದಿತ ಅವಧಿಯಲ್ಲಿ ಪೂರ್ಣ ಆಗುವುದರ ಜೊತೆಗೆ ಗುಣಮಟ್ಟವನ್ನು ಕಾಪಾಡಬೇಕು. ಕಾಗದದ ಮೇಲಿನ ಪ್ರಗತಿಯನ್ನು ಒಪ್ಪಲು ಸಾಧ್ಯವಿಲ್ಲ. ವಾಸ್ತವದ ನೆಲೆಯಲ್ಲಿ ಪ್ರಗತಿ ಆಗಬೇಕು. ಇಲ್ಲದಿದ್ದರೆ ಸಂಬಂಧಪಟ್ಟವರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಬೋಸರಾಜು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೋಮವಾರ ಪ್ರಾದೇಶಿ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಇಲಾಖೆ ಎಂಜಿನಿಯರ್ ಗಳಿ ಸೃಳಕ್ಕೆ ನಿರಂತರವಾಗಿ ಭೇಟಿ ನೀಡಿದರೆ ಸಮಸ್ಯೆಯ ವಾಸ್ತವದ ಸ್ಥಿತಿಗತಿ ತಿಳಿಯುತ್ತದೆ.ಜೊತೆಗೆ ಪರಿಹಾರ ಕಂಡು ಹಿಡಿಯಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.
ತಮಗೆ ನೀಡುವ ಮಾಹಿತಿ ವಾಸ್ತವತೆಯಿಂದ ಕೂಡಿರಬೇಕು. ಕಾಗದದ ಮೇಲಿನ ಅಂಕಿ ಅಂಶಗಳನ್ನು ನಂಬುವುದಿಲ್ಲ. ಮಳೆಗಾಲ ಆರಂಭವಾಗಿದ್ದು, ಕೆರೆಗಳ ದುರಸ್ತಿ ಕೆಲಸ ತ್ವರಿತವಾಗಿ ಆಗಬೇಕು. ಕೆರೆಗಳು ಒಡೆದರೆ ಬಡ ರೈತರು ತೊಂದರೆಗೆ ಒಳಗಾಗುತ್ತಾರೆ. ಕೆರೆಕಟ್ಟೆಗಳು ಮತ್ತು ಏತ ನೀರಾವರಿ ಮೂಲಕ ಬೆಳೆಗಳಿಗೆ ಸಮರ್ಪಕವಾಗಿ ನೀರು ಒದಗಿಸಬೇಕು ಎಂದು ಸೂಚಿಸಿದರು.
ಸರ್ಕಾರ ಮತ್ತು ಇಲಾಖೆ ನಡುವೆ ಸಮನ್ವಯತೆ ಇದ್ದರೆ ಮಾತ್ರ ಸುಲಭವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯ. ಹಿಂದೆ ತಪ್ಪುಗಳು ಆಗಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ವಿಶೇಷ ಘಟಕ ಯೋಜನೆಯಡಿ ಅಂತರ್ಜಲ ಅಭಿವೃದ್ಧಿ ಮತ್ತು ಏತ ನೀರಾವರಿ ಯೋಜನೆಗಳು ಪುನರುಜ್ಜೀವನಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ . ಈ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ಎಂಜಿನಿಯರ್ ಗಳಿಗೆ ಹೇಳಿದರು.
ಬಿಲ್ ಪಾವತಿ
ಈಗ ತಮ್ಮ ಇಲಾಖೆಯಿಂದ ಸಾವಿರಾರು ಕೋ. ಟ ರೂಪಾಯಿ ಯೋಜನಾ ಕಾಮಗಾರಿಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ನಡುವೆ ಹೊಸ ಯೋಜನೆಗಳನ್ನು ಆರಂಭಿಸಬೇಕಿದೆ. ಬಾಕಿ ಬಿಲ್ ಅನ್ನುಜೇಷ್ಠತೆ ಮೇರೆಗೆ ವ್ಯವಸ್ಥಿತವಾಗಿ ನೀಡಬೇಕು. ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಮುಖ್ಕ ಎಂಜಿನಿಯರ್ಗೆ ಸೂಚನೆ ನೀಡಿದರು.
ವಸ್ತಿಸ್ಥಿತಿಯಿಂದ ಕೂಡಿದ ವರದಿ ನೀಡಬೇಕು.ಕಠಿಣ ಸಮಸ್ಸೆ ಇದ್ದರೆ ಮೇಲಧಿಕಾರಿಗಳಿಗೆ ತಿಳಿಸಬೇಕು.. ಕಾಮಗಾರಿಗಳ ಬಿಲ್ ಪಾವತಿ ಪಾರದರ್ಶಕವಾಗಿರಬೇಕು. ಹೊಸ ಸರ್ಕಾರ ಅಧಿಕಾರ ಬಂದ್ ಮೇಲೆ ಜನರು ನಿರೀಕ್ಷೆಯಂತೆ ಕೆಲಸ ಮಾಡಬೇಕು ನೆಲಮಟ್ಟದ ಸಮಸ್ಯೆಯನ್ನು ಅರಿತು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
.ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ರಾಘವನ್, ಅಧೀಕ್ಷಕ ಎಂಜಿನಿಯರ್ ಕಿಶೋರ್ ಮತ್ತು ಮಂಗಳೂರು, ಹಾಸನ,, ಮೈಸೂರು, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು, ಮಂಡ್ಯ ಜೆಲ್ಲೆಗಳ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮತ್ತು ಅಧಿಕಾರಿ ಗಳು ಭಾಗವಹಿಸಿದ್ದರು.
ವರ್ಗಾವಣೆಗೆ ನೇರವಾಗಿ ನನ್ನ ಬಳಿ ಬನ್ನಿ ದಳ್ಳಾಳಿ ಬೇಡ
ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡುತ್ತಾ ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜು ಅವರು, ವರ್ಗಾವಣೆ ಸಂಬಂಧಪಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನೇರವಾಗಿ ನನ್ನ ಬಳಿಯೇ ಬನ್ನಿ ಅನುಕೂಲ ಮಾಡಿಕೊಡೋಣ. ಆದರೆ ಈ ವಿಚಾರದಲ್ಲಿ ಮಧ್ಯವರ್ತಿಗಳು ಬೇಡ. ಏನೇ ಸಮಸ್ಯೆ ಇದ್ದರೂ ಕೂಡ ನನ್ನ ಬಳಿಯೇ ಹೇಳಿ ಎಂದು ಇಲಾಖೆ ಎಂಜಿನಿಯರ್ ಗಳಿಗೆ ಕಿವಿಮಾತು ಹೇಳಿದರು.