ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಮೇ 24: ಕೇಂದ್ರ ಸರ್ಕಾರ ವಿತ್ತ ಸಚಿವಾಲಯವು ದೇಶಾದ್ಯಂತ ಸಾರ್ವಜನಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ (PMSBY) ಯೋಜನೆಗಳ ನೋಂದಾಣಿ ಕಾರ್ಯವನ್ನು ದೇಶಾದ್ಯಂತ ಹಮ್ಮಿಕೊಂಡಿದೆ.
ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲಾದ್ಯಂತ ಈ ಮೇಲಿನ ಯೋಜನೆಗಳ ನೋಂದಾಣಿ ಕಾರ್ಯ ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ತಮ್ಮ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ನೋಂದಾಣಿ ಮಾಡಿಕೊಳ್ಳಬೇಕು ಹಾಗೂ ಈ ಮೇಲಿನ ಯೋಜನೆಗಳಿಗೆ ವಾರ್ಷಿಕ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ (PMJJBY) ಯೋಜನೆಗೆ ರೂ.436/- ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ (PMSBY) ಯೋಜನೆಗೆ ರೂ. 20/- ಗಳನ್ನು ಈ ಒಂದು ಯೋಜನೆಗಳಿಗೆ ಒಳಪಡಬಹುದಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.