ಸುದ್ದಿಮೂಲ ವಾರ್ತೆ
ದೇವನಹಳ್ಳಿ,ಆ.21: ತಾಲೂಕಿನ ಇಬ್ಬರು ಕಲಾವಿದರು ತಮ್ಮದೇ ಆದ ರೀತಿಯಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಳ್ಳುವುದರ ಮೂಲಕ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ನಿಲೇರಿ ಅಂಬರೀಶ್ಗೌಡ ಶ್ಲಾಘಿಸಿದರು.
ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದರಾದ ರಬ್ಬನಹಳ್ಳಿ ಡಾ.ಡಿ.ಕೆಂಪಣ್ಣ ಮತ್ತು ಹೊಸಹಳ್ಳಿ ವಾಸುದೇವ್ ಅವರುಗಳನ್ನು ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ಅವರು, ತಾಲೂಕು ಎಲ್ಲಾ ಕ್ಷೇತ್ರದಲ್ಲಿಯೂ ಮುಂದಿದೆ. ಅನೇಕ ಸಾಮಾಜಿಕ ಕೆಲಸಗಳನ್ನು ಗುರುತಿಸಿ ನಮ್ಮ ತಾಲ್ಲೂಕಿನವರಿಗೆ ಕರ್ನಾಟಕ ರತ್ನ ಶ್ರೀ ಲೋಕೇಶ್ ಸ್ಮರಣಾರ್ಥ ಪ್ರಶಸ್ತಿಯನ್ನು ದೊಡ್ಡ ಹೊಸಹಳ್ಳಿ ವಾಸುದೇವ್ ಅವರಿಗೆ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಕೆಂಪಣ್ಣ ರವರಿಗೆ ನೀಡಿರುವುದು ಸಂತಸದ ವಿಷಯವಾಗಿದೆ. ರಂಗಭೂಮಿಯಲ್ಲಿ ಬಂದಿರುವ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಇಂತಹ ಕಾರ್ಯಕ್ರಮಗಳಿಂದ ಯುವಜನಾಂಗ ಮತ್ತಷ್ಟು ಕಲಾ ಭೂಮಿಯಲ್ಲಿ ತೊಡಗಿಸಿಕೊಳ್ಳಲು ಆದರ್ಶವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರತಾಪ್, ಪುನಿತಾ, ರೂಪೇಶ್, ಮಧು, ಗಣೇಶ್, ಸುರೇಶಾಚಾರ್, ರಾಜೇಶ್, ಮಂಜುನಾಥ್ ಇತರರು ಇದ್ದರು.