ಸುದ್ದಿಮೂಲ ವಾರ್ತೆ ಕಲಬುರಗಿ, ಸೆ.30:
ರಾಜ್ಯದಾದ್ಯಂತ ಪ್ರಸ್ತುತ ಸಾಲಿನ ಜೂನ್ ಮಾಹೆಯಿಂದ ಇಲ್ಲಿಯವರೆಗೆ ಅತಿವೃಷ್ಠಿಿ ಮತ್ತು ವ್ಯಾಾಪಕ ಮಳೆಯಿಂದ ಪ್ರಾಾಥಮಿಕ ವರದಿ ಪ್ರಕಾರ 10 ಲಕ್ಷಕ್ಕೂ ಹೆಚ್ಚಿಿನ ಹೆಕ್ಟೇರ್ ಪ್ರಮಾಣದ ಬೆಳೆ ಹಾನಿಯಾಗಿದ್ದು, ಎನ್.ಡಿ.ಆರ್.ಎ್. ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ನಿಡಲಾಗುವುದು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಘೋಷಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಿಕಾಗೋಷ್ಠಿಿ ಉದ್ದೇಶಿಸಿ ಮಾತನಾಡಿದ ಅವರು ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳ ಹಾನಿಯ ಪ್ರತಿ ಹೆಕ್ಟೇರ್ಗೆ ಈ ಪರಿಹಾರ ಸಿಗಲಿದೆ. ಇದರಿಂದ ಒಟ್ಟಾಾರೆಯಾಗಿ ಮಳೆಯಾಶ್ರಿತ ಪ್ರತಿ ಹೆಕ್ಟೇರ್ಗೆ 17,000 ರೂ., ನೀರಾವರಿ ಬೆಳೆಗಳಿಗೆ 25,500 ರೂ. ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 31,000 ರೂ. ಪರಿಹಾರ ಸಿಗಲಿದೆ. ಒಟ್ಟಾಾರೆಯಾಗಿ ಎನ್.ಡಿ.ಆರ್.ಎ್. ಮತ್ತು ಹೆಚ್ಚುವರಿ ಪರಿಹಾರ ಸೇರಿ ರಾಜ್ಯ ಸರ್ಕಾರದಿಂದ 2,000 ಕೋಟಿಗಿಂತ ಹೆಚ್ಚಿಿನ ಹಣ ರೈತರಿಗೆ ಪರಿಹಾರ ರೂಪದಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿಿಗಳು ತಿಳಿಸಿದರು.
ಈ ವರ್ಷ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಮಹಾರಾಷ್ಟ್ರದಿಂದ ಹೆಚ್ಚಿಿನ ನೀರು ಬಿಟ್ಟಿಿರುವ ಮತ್ತು ಸತತ ಮಳೆಯಿಂದ ಪ್ರಾಾಥಮಿಕ ಅಂದಾಜಿನ ಪ್ರಕಾರ 8,88,953 ಹೆಕ್ಟೇರ್ ಕೃಷಿ ಬೆಳೆಗಳು ಮತ್ತು 71,624 ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ಇಂದಿಲ್ಲಿ ಸಚಿವರೊಂದಿಗೆ ವಿಜಯಪುರ, ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯ ವೈಮಾನಿಕ ಸಮೀಕ್ಷೆ ಮಾಡಿದ್ದು, ಜಮೀನುಗಳು ಕೆರೆಗಳಾಗಿ ಮಾರ್ಪಟ್ಟಿಿವೆ. ರಸ್ತೆೆ ಸಂಪರ್ಕ ಕಡಿತಗೊಂಡಿವೆ, ಸೇತುವೆ ಹಾಳಾಗಿವೆ, ಅನೇಕ ಮೂಲಸೌಕರ್ಯ ಸಹ ಹಾನಿಯಾಗಿವೆ. ರೈತರು ಎರಡೆರೆಡು ಬಾರಿ ಬೆಳೆದರು ಲ ಸಿಕ್ಕಿಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಸಹ ಹೆಚ್ಚುವರಿಯಾಗಿ ಪರಿಹಾರ ನೀಡಬೇಕು ಎಂದು ತಿಳಿಸಿದರು.
ರಾಜ್ಯದಾದ್ಯಂತ ಇದೂವರೆಗೆ 52 ಜನ ಮಾನವ ಹಾನಿಯಾಗಿದ್ದು, 422 ಜಾನುವಾರುಗಳು ಮಳೆಗೆ ಕೊಚ್ಚಿಿ ಹೋಗಿವೆ. ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. 547 ಪೂರ್ಣ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದು, ತಲಾ 1.20 ಲಕ್ಷ ರೂ. ಗಳಂತೆ ಮತ್ತು ಭಾಗಶ: ಮನೆ ಹಾನಿಯಾದ 75 ಪ್ರಕರಣಗಳಲ್ಲಿ ತಲಾ 50 ಸಾವಿರ ರೂ. ಗಳಂತೆ ಪರಿಹಾರ ನೀಡಲಾಗಿದೆ. 3,881 ಮನೆಗಳು ಶೇ.15 ರಿಂದ 25ರಷ್ಟು ಹಾನಿಗೊಳಗಾಗಿದ್ದು, ಮನೆ ಮಾಲೀಕರಿಗೆ 6,500 ರೂ. ಗಳಂತೆ ಪರಿಹಾರ ನೀಡಲಾಗಿದೆ. ಮನೆಗೆ ನೀರು ನುಗ್ಗಿಿ ಆಹಾರ ಧಾನ್ಯ, ಗೃಹೋಪಯೋಗಿ ವಸ್ತುಗಳ ಹಾನಿಗೆ ಇದುವರೆಗೆ 2.50 ಕೋಟಿ ರೂ. ಪರಿಹಾರ ನೀಡಲಾಗಿದೆ. ಜಂಟಿ ಸಮೀಕ್ಷೆ ನಡೆಯುತ್ತಿಿದ್ದು, ಪರಿಹಾರ ವಿತರಣೆ ಕಾರ್ಯ ನಿರಂತರವಾಗಿರಲಿದೆ ಎಂದರು.
117 ಗ್ರಾಾಮಕ್ಕೆೆ ತೊಂದರೆ, 80 ಕಾಳಜಿ ಕೇಂದ್ರ ಸ್ಥಾಾಪನೆ:
ತೀವ್ರ ಅತಿವೃಷ್ಠಿಿಗೆ ಒಳಗಾದ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ 117 ಗ್ರಾಾಮಗಳು ತೊಂದರೆಗೀಡಾಗಿದ್ದು, ಕಲಬುರಗಿ-56, ವಿಜಯಪುರ-17 ಹಾಗೂ ಯಾದಗಿರಿಯಲ್ಲಿ 7 ಸೇರಿದಂತೆ ಒಟ್ಟಾಾರೆ 80 ಕಾಳಜಿ ಕೇಂದ್ರ ತೆರೆದು 10,576 ಜನ ಸಂತ್ರಸ್ತರಿಗೆ ಊಟೋಪಚಾರದ ಜೊತೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದರು.
ಪತ್ರಿಿಕಾಗೋಷ್ಠಿಿಯಲ್ಲಿ ರಾಜ್ಯದ ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್. ಚೆಲುವರಾಯಸ್ವಾಾಮಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್, ವೈದ್ಯಕೀಯ ಶಿಕ್ಷಣ, ಕೌಶಾಲಾಭಿವೃದ್ಧಿಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ, ಅರಣ್ಯ ಪರಿಸರ ಮತ್ತು ಜೀವಿಶಾಸ ಸಚಿವ ಈಶ್ವರ ಖಂಡ್ರೆೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ್ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಚಂದ್ರಶೇಖರ ಪಾಟೀಲ, ಜಗದೇವ ಗುತ್ತೇದಾರ, ಇಂಧನ ಇಲಾಖೆಯ ಹೆಚ್ಚುವರಿ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕೆ.ಪಿ.ಟಿ.ಸಿ.ಎಲ್. ವ್ಯವಸ್ಥಾಾಪಕ ನಿರ್ದೇಶಕರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಕಲಬುರಗಿ ಜಿಲ್ಲಾಧಿಕಾರಿ ಬಿ.ೌಜಿಯಾ ತರನ್ನುಮ್ ಇದ್ದರು.
ರಾಜ್ಯದಲ್ಲಿ ಹಾನಿಯಾದ 10 ಲಕ್ಷ ಹೆಕ್ಟಆರ್ ಪೈಕಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಯೇ ಶೇ.95ರಷ್ಟು ಹಾನಿಯಾಗಿದೆ. ಕಲಬುರಗಿ, ಬೀದರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಇದರ ಪ್ರಮಾಣ ಹೆಚ್ಚಿಿದೆ. ಇದಲ್ಲದೆ ರಾಯಚೂರು, ಬೆಳಗಾವಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹಾನಿಯಾಗಿದೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.
ಕೋಟ್:
ಕೇಂದ್ರ ಸರ್ಕಾರ ಸಹ ಹೆಚ್ಚುವರಿಯಾಗಿ ಪರಿಹಾರ ನೀಡಬೇಕು, ಬೆಳೆ ಹಾನಿ ಜಂಟಿ ಸಮೀಕ್ಷೆ ಮುಗಿದ ನಂತರ ಕೇಂದ್ರಕ್ಕೆೆ ನಿಯೋಗ ತೆಗೆದುಕೊಂಡು ಹೋಗಲಾಗುವುದು.
-ಸಿದ್ದರಾಮಯ್ಯ ಮುಖ್ಯಮಂತ್ರಿಿಗಳು.
ರಾಜ್ಯದಾದ್ಯಂತ ಅತಿವೃಷ್ಠಿಿಯಿಂದ 10 ಲಕ್ಷ ಹೆಕ್ಟೇರಿಗೂ ಹೆಚ್ಚು ಬೆಳೆ ಹಾನಿ ಪ್ರತಿ ಹೆಕ್ಟೇರ್ಗೆ ರಾಜ್ಯ ಸರ್ಕಾರದಿಂದ 8,500 ರೂ. ಹೆಚ್ಚುವರಿ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

