ಸುದ್ದಿಮೂಲ ವಾರ್ತೆ ಬೆಂಗಳೂರು, ನ.27:
ಮಹಾನಗರ ಪಾಲಿಕೆಯಾಗಿದ್ದ ಮೈಸೂರು ನಗರವನ್ನು ಬೃಹತ್ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿ ಸಚಿವ ಸಂಪುಟ ಸಭೆ ಗುರುವಾರ ಮಹತ್ವದ ನಿರ್ಣಯ ಅಂಗೀಕರಿಸಿದೆ.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯನ್ನು ಮಹಾನಗರ ಪಾಲಿಕೆಯಾಗಿ ಘೋಷಣೆ ಮಾಡುವುದಕ್ಕೆೆ ಅನುಮೋದನೆ ದೊರೆಯಿತು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಿಯಲ್ಲಿ ಹೇಳಿದರು.
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಸೆಕ್ಷನ್-3, 4.500 ಮತ್ತು 501ರ ಅನ್ವಯ ಶೆಡ್ಯೂಲ್-ಎಯಲ್ಲಿ ಒಳಗೊಂಡ ಪ್ರದೇಶಗಳನ್ನು ಹಾಗೂ ಶೆಡ್ಯೂಲ್-ಬಿನಲ್ಲಿ ಆ ಪ್ರದೇಶದ ಗಡಿರೇಖೆಯಲ್ಲಿ ಗುರುತಿಸಿರುವಂತೆ ಸುತ್ತಲಿನ ಪ್ರದೇಶಗಳನ್ನುಮೈಸೂರು ಮಹಾನಗರ ಪಾಲಿಕೆ ವ್ಯಾಾಪ್ತಿಿಗೆ ಸೇರಿಸಿಕೊಂಡು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಾಗಿ ಘೋಷಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇೇರ್ಟ ಬೆಂಗಳೂರು ಪ್ರಾಾಧಿಕಾರ ರಚನೆ ಮಾಡಿದ ಬೆನ್ನಲ್ಲೇ ಮೈಸೂರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ಘೋಷಿಸಣೆ ಮಾಡಬೇಕು ಎಂದು ಹಲವರು ಸರ್ಕಾರಕ್ಕೆೆ ಒತ್ತಾಾಯ ಮಾಡಿದ್ದರು. ಈ ಹಿನ್ನೆೆಲೆಯಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.

