ಸುದ್ದಿಮೂಲ ವಾರ್ತೆ
ಆನೇಕಲ್, ಸೆ. 12 : ಆನೇಕಲ್ ಪಟ್ಟಣದ ಹೃದಯಭಾಗದಲ್ಲಿ ಇರುವ ಸಾರ್ವಜನಿಕ ಆಸ್ಪತ್ರೆಗೆ ಮಹಿಳೆಯರು ಹಿಡಿ ಶಾಪ ಹಾಕುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ವೈದ್ಯರು ಹಾಗೂ ಸಿಬ್ಬಂದಿಗಳಿಂದ ಆಸ್ಪತ್ರೆಗೆ ಬರುವ ರೋಗಿಗಳು ಹೈರಾಣಾಗಿದ್ದಾರೆ.
ಸಿಬ್ಬಂದಿ ಕೊರತೆಯಿಂದ ಆಡಳಿತ ನಡೆಸಲು ವೈದ್ಯೆ ನಳಿನಿ ಅವರು ವಿಫಲಾರಗಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದಾರೆ. ಎಕ್ಸರೇ ವ್ಯವಸ್ಥೆ ಇದ್ದರೂ, ಎರಡು, ಮೂರು ತಿಂಗಳುಗಳಿಂದ ಪೇಂಟೀಂಗ್ ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ, ಖಾಸಗಿ ಆಸಪತ್ರೆಗಳಿಗೆ ಶಿಫಾರಸ್ಸು ಮಾಡಿ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಸಮಯಕ್ಕೆ ಮುಂಚಿತವಾಗಿ ಆಸ್ಪತ್ರೆಯಿಂದ ತೆರಳುತ್ತಾರೆ. ಹೊರಗುತ್ತಿಗೆ ಮೇಲೆ ಕೆಲಸಕ್ಕೆ ಬರುವ ಸಿಬ್ಬಂದಿಗಳಿಂದ ಮಾತ್ರ ಕೆಲಸ ಮಾಡಿಸುತ್ತಿದ್ದಾರೆ. ಈ ಬಗ್ಗೆ ವೈದ್ಯಾಧಿಕಾರಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.