ಸುದ್ದಿಮೂಲ ವಾರ್ತೆ
ಆನೇಕಲ್, ಮಾ.ಮಾ.27: ಅತಿ ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್ ಲಾರಿಯೊಂದು ನಿಯಂತ್ರಣ ತಪ್ಪಿ, ಎರಡು ಬೈಕ್ಗಳಿಗೆ ಮತ್ತು ಹಿಂಬದಿ ಕಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿರುವ ಘಟನೆ ತಮಿಳುನಾಡಿನ ಗಡಿ ಭಾಗದ ದರ್ಗಾ ಬಳಿ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಟಿಪ್ಪರಿ ಚಾಲಕ ಕಲಾಯಿಹರಸನ್ ತಲೆಗೆ ಮತ್ತು ಕಾಲಿಗೆ ಪೆಟ್ಟಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಇನ್ನು ಈ ಭೀಕರ ರಸ್ತೆ ಅಪಘಾತದ ದೃಶ್ಯಗಳು ಬಸ್ನಲ್ಲಿ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ..