ಸುದ್ದಿಮೂಲ ವಾರ್ತೆ
ತುಮಕೂರು, ಮಾ.30: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ
ವಿವಿಧ ಪಶುಪಾಲನೆ, ಕುರಿ ಹಾಗೂ ಮೇಕೆ ಸಾಕಾಣಿಕೆ ಕುರಿತು ಏ. 5 ಮತ್ತು 6 ರಂದು ಆಸಕ್ತ 25 ಜನ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ತರಬೇತಿಗೆ ಹಾಜರಾಗಲು ಇಚ್ಛಿಸುವವರು ಎರಡು ಪಾಸ್ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ
ತರಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ/ದೂರವಾಣಿ ಸಂಖ್ಯೆ 0816-2251241ನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.