ಸುದ್ದಿಮೂಲ ವಾರ್ತೆ
ಮೈಸೂರು, ಮೇ 22: ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯ
ಸಿದ್ದರಾಮಯ್ಯನವರು ಸಿಎಂ ಆಗಿರುವುದು ಸಂತೋಷದ ಸಂಗತಿ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ರಾಜ್ಯದ ಒಳಿತಿಗಾಗಿ ಕೆಲಸ ಮಾಡಲಿ. ಜೊತೆಗೆ ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾಗಿರುವುದು ಖುಷಿಯ ವಿಚಾರ ಎಂದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ನಂಬಿ ಸಂಪೂರ್ಣ ಬಹುಮತ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನು ಜನತೆ ಕಿತ್ತೆಸೆದಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು ಹೇಳಿದರು.