ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.27: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.
ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆ ಯಾಗಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಬೇಡಿಕೆ ಇಟ್ಟರು.
ಭೋವಿ ಸಮಾಜದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಗಂಭೀರವಾಗಿ ಚರ್ಚೆ ಮಾಡಲಾಗುವುದು, ವಸ್ತು ಸ್ಥಿತಿ ವಿವರಿಸಲಾಗುವುದು ಎಂದು ಭರವಸೆ ನೀಡಿದರು.
ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್ .ಸಿ ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣಪ್ಪ, ಶಾಸಕ ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.