ಸುದ್ದಿಮೂಲ ವಾರ್ತೆ ನವದೆಹಲಿ, ಡಿ.23:
ಮೆಟ್ರೋೋ -3 ಎ ನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಬೇಕು ಹಾಗೂ ಮೆಟ್ರೋೋ-2ನೇ ಹಂತದ ಪರಿಷ್ಕೃತ ದರಕ್ಕೆೆ ಒಪ್ಪಿಿಗೆ ನೀಡುವಂತೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರಿಗೆ ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸಚಿವರನ್ನು ಭೇಟಿ ಮಾಡಿ ಹಲವು ಮನವಿ ಸಲ್ಲಿಸಿದರು.
ಬೆಂಗಳೂರು ದೇಶದ ಮಹಾನಗರಗಳಲ್ಲಿ ಒಂದಾಗಿದ್ದು, ಇಲ್ಲಿ ಅನೇಕ ನಗರಾಭಿವೃದ್ಧಿಿ ಯೋಜನೆಗಳನ್ನು ಹಮ್ಮಿಿಕೊಳ್ಳಲಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾಾವನೆಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಾಕಿ ಉಳಿದಿರುವ ಅನುಮತಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೆಟ್ರೋೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ 26,405 ಕೋಟಿ ರೂ.ನಿಂದ 40,425 ಕೋಟಿ ರೂ.ವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ದಿನಾಂಕ 05.06.2025ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾಾವನೆಯನ್ನು ಕೇಂದ್ರ ಸಚಿವಾಲಯಕ್ಕೆೆ 09.06.2025ರಂದು ಕಳುಹಿಸಲಾಗಿದ್ದು, ಈ ಪ್ರಸ್ತಾಾವನೆಗೆ ಒಪ್ಪಿಿಗೆ ನೀಡಬೇಕು ಎಂದು ಮನವಿ ಮಾಡಿದರು.
ಮೆಟ್ರೋೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ. ಈ ಯೋಜನೆಗೆ 10.01.2025ರಂದು ಕರ್ನಾಟಕ ಸರ್ಕಾರ ಒಪ್ಪಿಿಗೆ ನೀಡಿದ್ದು, 15.01.2025ರಂದು ಕೇಂದ್ರ ಸಚಿವಾಲಯದ ಒಪ್ಪಿಿಗೆಗೆ ಪ್ರಸ್ತಾಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸಚಿವಾಲಯದ ಒಪ್ಪಿಿಗೆ ಬಾಕಿ ಇದ್ದು, ಆದಷ್ಟು ಬೇಗ ಒಪ್ಪಿಿಗೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಅಲ್ಲದೆ ಆರ್ಆರ್ಟಿಎಸ್ ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿಿ ಕೆರೆ ಬಳಿ ವಿವಿಧ ಹಂತದ ತ್ಯಾಾಜ್ಯ ವಿಲೇವಾರಿಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರನ್ನು ಕೋರಿದರು.
ಬಾಕ್ಸ್
ಹಜಾರೆ ಪಂದ್ಯಾಾವಳಿಗೆ ಅನುಮತಿ ನಿರಾಕರಣೆ ಗೊತ್ತಿಿಲ್ಲ
ಚಿನ್ನಸ್ವಾಾಮಿ ಕ್ರೀೆಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋೋಫಿ ಪಂದ್ಯಕ್ಕೆೆ ಪೊಲೀಸರ ಅನುಮತಿ ನಿರಾಕರಣೆ ನನಗೆ ಗೊತ್ತಿಿಲ್ಲ. ಬೆಂಗಳೂರಿನಲ್ಲಿ ಕ್ರಿಿಕೆಟ್ ಪಂದ್ಯಗಳು ನಡೆಯಬೇಕು, ಗೌರವ ಉಳಿಯಬೇಕು ಎಂದು ಬಯಸುವವನು ನಾನು. ಮುಂದೆ ಮತ್ತೆೆ ಅನಾಹುತ ಆಗದಂತೆ ನೋಡಿಕೊಳ್ಳಲು ಯಾವ ಮಾನದಂಡ ನಿಗದಿ ಮಾಡಬಹುದು ಎಂದು ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ನುಡಿದರು.
ಈ ವಿಚಾರವಾಗಿ ಗೃಹ ಸಚಿವರಿಗೆ ಜವಾಬ್ದಾಾರಿ ನೀಡಲಾಗಿದ್ದು, ಅವರೊಂದಿಗೆ ಚರ್ಚೆ ಮಾಡುತ್ತೇನೆ. ಅವರು ಒಲಿಂಪಿಕ್ಸ್ ಸಂಸ್ಥೆೆ ಅಧ್ಯಕ್ಷರಾಗಿದ್ದವರು, ಅವರಿಗೂ ಅನುಭವವಿದೆ ಎಂದು ತಿಳಿಸಿದರು.
ಪ್ರಿಿಯಾಂಕ ಗಾಂಧಿ ಅವರನ್ನು ಪ್ರಧಾನಮಂತ್ರಿಿ ಮಾಡಬೇಕು ಎಂಬ ಹೇಳಿಕೆ ಬಗ್ಗೆೆ ಕೇಳಿದಾಗ, ನಾನು ರಾಜಕೀಯ ವಿಚಾರಕ್ಕೆೆ ದೆಹಲಿಗೆ ಆಗಮಿಸಿಲ್ಲ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳು ಹಾಗೂ ಬೆಂಗಳೂರಿನ ಪ್ರಮುಖ ಯೋಜನೆಗಳ ಬಗ್ಗೆೆ ಚರ್ಚೆ ಮಾಡಲು ಬಂದಿದ್ದೇನೆ. ಇದರ ಹೊರತಾಗಿ ರಾಜಕೀಯ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಿಯೆ ನೀಡುವುದಿಲ್ಲ ಎಂದರು.

