ಸುದ್ದಿಮೂಲ ವಾರ್ತೆ
ಬೆಂಗಳೂರು, ಜು 14 : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ವೈಯಕ್ತಿಕ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಆಗಸ್ಟ್ 15 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ : www.dwdsc.karnataka.gov.in ಹಾಗೂ ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರಿನ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.