ಸುದ್ದಿಮೂಲ ವಾರ್ತೆ
ತುಮಕೂರು, ಮೇ 24: ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 3 ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್, ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್, ಅಪೆರಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35 ಅಂಕಗಳೊಂದಿಗೆ ಉತ್ತೀರ್ಣರಾದ ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು.
ಹೆಚ್ಚಿನ ಮಾಹಿತಿಗೆ: 9844644937ನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 17ರೊಳಗೆ ಮೇಲ್ಕಂಡ ವಿಳಾಸಕ್ಕೆ ತಲುಪಿಸಬೇಕೆಂದು ಪ್ರಕಟಣೆ ತಿಳಿಸಿದೆ.