ಸುದ್ದಿಮೂಲವಾರ್ತೆ
ಕೊಪ್ಪಳ,ಮೇ19 : ಕೊಪ್ಪಳ ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ 2023-24ನೇ ಸಾಲಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗಾಗಿ ಡಿಪ್ಲೋಮಾ ಕೋರ್ಸಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 3+1 ವರ್ಷ ಅವಧಿಯ ಡಿಪ್ಲೋಮಾ ಕೋರ್ಸಗಳಾದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (ಡಿಟಿಡಿಎಂ) ಹಾಗೂ ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ (ಡಿಎಂಸಿಹೆಚ್) ಪ್ರವೇಶಕ್ಕೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಜಿಟಿಟಿಸಿ ಕೇಂದ್ರದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್ ದದೇಗಲ್ ಕೊಪ್ಪಳ ಇಲ್ಲಿ ಖುದ್ದಾಗಿ ಬಂದು ಅಥವಾ ಅಂತರ್ಜಾಲ http://karunadu.karnataka.govt.in & http://gttc.co.in ನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ, ಅರ್ಜಿಯನ್ನು ಮೇ 31ರ ಒಳಗಾಗಿ ಜಿಟಿಟಿಸಿಗೆ ಖುದ್ದಾಗಿ ಅಥವಾ ಅಂತರ್ಜಾಲದಲ್ಲಿಯೂ ಸಹ ಹಾಕಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು, ಸ.ಉ. & ತ.ಕೇ.ಕೊಪ್ಪಳ ಇವರ ದೂ.ಸಂ: 750704445, 9986088894 ಗೆ ಸಂಪರ್ಕಿಸಬಹುದು.
ಜಿಟಿಟಿಸಿ ಎಂದರೇನು: ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯು, 1972ರಲ್ಲಿ ಸ್ಥಾಪನೆಗೊಂಡು, ರಾಜ್ಯಾದ್ಯಂತ 28 ಡಿಪ್ಲೋಮಾ ಕಾಲೇಜುಗಳನ್ನು ಹೊಂದಿದ್ದು, ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಹಾಗೂ ಎಮ್.ಟೆಕ್ ಕೋರ್ಸ್ಗಳನ್ನು ನಡೆಸುವ ಎಐಸಿಟಿಇ ಯಿಂದ ಅನುಮೋದನೆಗೊಂಡು ಅತ್ಯುನ್ಯತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿದೆ. ರಾಜ್ಯ ಸರಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಜಿಟಿಟಿಸಿ ಡಿಪ್ಲೋಮಾ ಕೋರ್ಸ್ಗಳ ವಿಶೇಷತೆ: ಜಿಟಿಟಿಸಿ ಡಿಪ್ಲೋಮಾ ಕೋರ್ಸ್ಗಳನ್ನು ಕ್ಲಾಸ್ರೂಮ್ ತರಬೇತಿಗಳಿಗಷ್ಟೆ ಸೀಮಿತಗೊಳಿಸದೆ ಪ್ರಾಯೋಗಿಕ ಹಾಗೂ ರಚನಾತ್ಮಕ ಕಲಿಕೆಗೆ ಒತ್ತು ನೀಡಿ ರೂಪಿಸಲಾಗಿದೆ.
ವಿದ್ಯಾರ್ಥಿಗಳಿಗೆ ಪಠ್ಯಕ್ರಮಗಳ ಜೊತೆಗೆ ಅತ್ಯಾದುನಿಕ ಯಂತ್ರೋಪಕರಣಗಳಾದ ಸಿ.ಎನ್.ಸಿ ಯಂತ್ರಗಳು, ರೋಬೋಟ್ಗಳು, 3ಡಿ ಮುದ್ರಕಗಳು, ಸಿ.ಎಮ್.ಎಮ್ ಇತ್ಯಾದಿಗಳನ್ನು ಬಳಸಿ ಪಾಠ ಮಾಡಲಾಗುತ್ತದೆ. ಕೈಗಾರಿಕೆ ಮತ್ತು ಕಂಪನಿಗಳ ಸಮಾಲೋಚನೆಯೊಂದಿಗೆ ಪಠ್ಯಕ್ರಮವನ್ನು ಇಂದಿನ ಮಾರುಕಟ್ಟೆಗಳ ಅಗತ್ಯಗಳಿಗನುಗುಣವಾಗಿ ವಿನ್ಯಾಸಗೊಳಿಸಲಾಗಿದೆ.
ಜಿಟಿಟಿಸಿ ಡಿಪ್ಲೋಮಾ, ಪಿ.ಡಿ.ಟಿ.ಡಿ ಮತ್ತು ಎಮ್.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ವಿದ್ಯಾರ್ಥಿಗಳಿಗೆ ಇದುವರೆಗೂ ಕೈಗಾರಿಕೆಗಳಲ್ಲಿ ಉತ್ತಮ ಉದ್ಯೋಗವಕಾಶಗಳಿವೆ, ದೇಶ, ವಿದೇಶಗಳಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಇರುವ ಬೇಡಿಕೆಯೇ ಇದಕ್ಕೆ ಸಾಕ್ಷಿಯಾಗಿದೆ. “ಜಿಟಿಟಿಸಿ ಪ್ರಾರಂಭದಿಂದ ಇಲ್ಲಿಯವರೆಗೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವಕಾಶವನ್ನು ಪಡೆದುಕೊಳ್ಳಲು ನೆರವಾಗಿದೆ.
ಜಿಟಿಟಿಸಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರಿಗೆ ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಕೋರ್ಸ್ಗಳಿಗೆ ದ್ವಿತೀಯ ವರ್ಷಕ್ಕೆ ನೇರ ಪ್ರವೇಶ ಹೊಂದಲು ಅವಕಾಶವಿರುತ್ತದೆ. ಎಸ್.ಸಿ/ಎಸ್.ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯವಿರುತ್ತದೆ. ಕೈಗಾರಿಕ ಪ್ರಾಯೋಜಿತ ಅಭ್ಯರ್ಥಿಗಳಿಗೆ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳಿಗೆ ಈ ಕಾಲೇಜು ಉತ್ತಮ ಅವಕಾಶ ಕಲ್ಪಿಸಿಕೊಡುತ್ತದೆ ಮತ್ತು ತರಬೇತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಶೇ 100ರಷ್ಟು ಉದ್ಯೋಗ ಅವಕಾಶವಿರುತ್ತದೆ. ಜಿಟಿಟಿಸಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರಿಗೆ ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಕೋರ್ಸ್ಗಳಿಗೆ ದ್ವಿತೀಯ ವರ್ಷಕ್ಕೆ ನೇರ ಪ್ರವೇಶ ಹೊಂದಲು ಅವಕಾಶವಿರುತ್ತದೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸೌಲಭ್ಯವನ್ನು ಒದಗಿಸಿಕೊಡಲಾಗುತ್ತದೆ ಎಂದು ಜಿಟಿಟಿಸಿ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.