ಸುದ್ದಿಮೂಲ ವಾರ್ತೆ
ಕುಷ್ಟಗಿ, ಮೇ. 17: ಉತ್ತಮ ಕಲಿಕಾ ಸೌಕರ್ಯ ಹಾಗೂ ಫಲಿತಾಂಶ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಪ್ರತಿವರ್ಷ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವ ಇಲ್ಲಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಪ್ರಸಕ್ತ ವರ್ಷ ಪ್ರಥಮ ಹಾಗೂ ದ್ವಿತೀಯ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಶುಲ್ಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ ಪ್ರವೇಶ ಪಡೆಯಲು ಇಚ್ಛೆಯುಳ್ಳ 10ನೇ ತರಗತಿಯ ಉತೀರ್ಣರಾದ ವಿದ್ಯಾರ್ಥಿನಿಯರು, ಮೂಲ ವರ್ಗಾವಣೆ ಪತ್ರದ, 10 ನೇ ತರಗತಿಯ ಅಂಕಪಟ್ಟಿ, ಪರೀಕ್ಷಾ ಪ್ರವೇಶ ಪತ್ರ, 3 ಪಾಸ್ ಪೋರ್ಟ್ & 2 ಸ್ಟ್ಯಾಂಪ್ ಸೈಜ್ ಫೋಟೋ, ಆಧಾರ್ ಕಾರ್ಡ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್(ಇದ್ದರೆ) ನಕಲು ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಜೂನ್ 15 ಪ್ರವೇಶ ದಾಖಲಾತಿಗೆ ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕಾಲೇಜು ಪ್ರಾಚಾರ್ಯ ಅವರನ್ನು ಸಂಪರ್ಕಿಸುವಂತೆ ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.