ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.17 :ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌಧ್ಧ, ಸಿಖ್, ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮುಖಾಂತರ ಎಂ.ಬಿ.ಬಿ.ಎಸ್, ಬಿಡಿಎಸ್, ಆಯುಷ್, ಬ್ಯಾಷುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮಾ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುವುದು. ನಿಗಮದ ವೆಬ್ಸೈಟ್ “http://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22114815 ಮತ್ತು ಹೆಲ್ಪ್ಲೈನ್ ಸಂಖ್ಯೆ: 827779990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.