ಸುದ್ದಿಮೂಲ ವರ್ತೆ
ತುಮಕೂರು,ಮೇ.24: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರತಿಷ್ಟಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪರಿಶಿಷ್ಟ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರವೇಶ ಪರೀಕ್ಷೆ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇಕಡ 60ರಷ್ಟು ಅಂಕ ಪಡೆದಿರಬೇಕು. ಕುಟುಂಬದ ಆದಾಯ 2 ಲಕ್ಷ ರೂ.ಗಳ ಮಿತಿಯೊಳಗಿರಬೇಕು.
ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶ ಪಡೆದ ಮಕ್ಕಳಿಗೆ ವಸತಿ, ಭೋಜನಾ ವೆಚ್ಚ, ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತç, ಪಠ್ಯಪುಸ್ತಕ, ಪ್ರವಾಸ ಭತ್ಯೆ ಹಾಗೂ ಇತರೆ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವಂತೆ ಶಾಲಾ ಶುಲ್ಕವನ್ನು ಉಚಿತವಾಗಿ ಪಾವತಿಸಲಾಗುವುದು.
ಭರ್ತಿ ಮಾಡಿದ ಅರ್ಜಿಯನ್ನು ಮೇ 30ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲೆಯ ಆಯಾ ತಾಲ್ಲೂಕಿನ ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಅಥವಾ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, 3ನೇ ಕ್ರಾಸ್, ಗಾಂಧಿನಗರ, ತುಮಕೂರು ಅಥವಾ ದೂ.ವಾ.ಸಂ.0816-2279153ನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.