ಸುದ್ದಿಮೂಲ ವಾರ್ತೆ
ವಿಜಯಪುರ,ಮೇ16: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ದೊರೆತ ಹಿನ್ನೆಲೆ ವಿಜಯಪುರ ಜಿಲ್ಲೆಯ ಒಬ್ಬ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಓನ್ಲಿ ಮುಸ್ಮಿಮ್ ರಾಷ್ಟ್ರ ಎಂದು ಸಾಮಾಜಿಕ ಜಾಲತಾಣದಲ್ಲಿ ಅರಿಬಿಟ್ಟಿದ್ದ ಯುವಕನನ್ನು ಪೊಲೀಸ್ರು ಬಂಧಿಸಿದ್ದಾರೆ.
ಕಾಂಗ್ರೆಸ್ ಸ್ಪಷ್ಟ ಬಹುಮತದ ಹಿನ್ನೆಲೆ ಅನೇಕ ಕಡೆ ಗಲಭೆಗಳು ಹೆಚ್ಚುತ್ತಲೇ ಇದ್ದು, ಇದೀಗಾ ಪಾಕಿಸ್ತಾನ್ ಜಿಂದಾಬಾದ್ ಎಂದು ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಎಂಬುವವನು ಇನ್ಸಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಇದನ್ನು ಗಮನಿಸಿದ ನೆರೆಹೊರೆಯವರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ನಂತರ ನ್ಯಾಲಾಯಕ್ಕೆ ಹಾಜರುಪಡಿಸಿ, ನ್ಯಾಯಲಾಯವು ಸದ್ಯದ ಮಟ್ಟಿಗೆ ಅವನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ.