ಸುದ್ದಿಮೂಲ ವಾರ್ತೆ
ಬೆಂಗಳೂರು ಏ೦೪: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಪ್ಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.