ಸುದ್ದಿಮೂಲ ವಾರ್ತೆ
ಸಿರುಗುಪ್ಪ,ಅ.07; ತಾಲೂಕಿನ ಕೆಂಚನಗುಡ್ಡ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ಜಲಾಲಿ ಮೇಲೆ ಹಲ್ಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.
ನಗರದ ಹಳೆ ಕೆಂಚನಗುಡ್ಡ ರಸ್ತೆಯ CNN ಶಾಲೆಯ ಹತ್ತಿರ ತಾಲೂಕಿನ ಕೆಂಚನಗುಡ್ಡ ಗ್ರಾಮದ ಬಿಲ್ ಕಲೆಕ್ಟರ್ ಜಲಾಲಿ ಹೋಗುತ್ತಿರುವ ಸಮಯದಲ್ಲಿ ಕೆಂಚನಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಯ್ಯ ಗುಡ್ಡದ ನಿವಾಸಿ ಬಸವರಾಜ ತನ್ನ ಹಳೆಯ ವೈಯಕ್ತಿಕ ದ್ವೇಷ ಮತ್ತು ಶೌಚಾಲಯ ವಿಷಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಿಬ್ಬಂದಿ ವರ್ಗದವರು ಆರೋಪ ವ್ಯಕ್ತಪಡಿಸಿ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ಠಾಣೆಯಲ್ಲಿ ದೂರು ದಾಖಲು ಮಾಡಿಕೊಳ್ಳಲು ಅಧಿಕಾರಿಗಳು ಸುಖ ಸುಮ್ಮನೆ ವಿಳಂಬ ಮಾಡುತ್ತಿದ್ದಾರೆಂದು ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾಣೆಯ ಮುಂದೆ ಜಮಾಯಿಸಿ ಯಾವುದೇ ರಾಜಕೀಯ ಹಸ್ತಕ್ಷೇಪ ಆಗದ ಹಾಗೆ ತಕ್ಷಣ ದೂರು ದಾಖಲು ಮಾಡಿಕೊಳ್ಳುವಂತೆ ಪೋಲಿಸ್ ಅಧಿಕಾರಿಗಳನ್ನು ಆಗ್ರಹಪಡಿಸಿದರು.
ಅಲ್ಲದೆ ಮೇಲಿಂದ ಮೇಲೆ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಮೇಲೆ ಹಲ್ಲೆಗಳು ನಡೆಯುತ್ತಿದ್ದು ಇದರಿಂದ ಸಿಬ್ಬಂದಿ ವರ್ಗಕ್ಕೆ ಅನ್ಯಾಯವಾಗುತ್ತಿದೆ ಇಂತಹ ಪ್ರಕರಣ ಮುಂದಿನ ದಿನಗಳಲ್ಲಿ ನಡೆಯದಂತೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಇವರಿಗೂ ಸಹ ಮನವಿ ನೀಡಿದ್ದಾರೆ.
ಈ ಘಟನೆಯ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮಪ್ಪ ನಮ್ಮ ಪಬ್ಲಿಕ್ ಆಪ್ ನೊಂದಿಗೆ ಮಾತನಾಡಿದ್ದಾರೆ.