ಸುದ್ದಿಮೂಲ ವಾರ್ತೆ
ಆನೇಕಲ್, ಆ.4: ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ಪೊಲೀಸರು ನಿತ್ಯ ಬೆಳಗ್ಗೆ ಮತ್ತು ಸಂಜೆ ಗಸ್ತು ತಿರುಗುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಆನೇಕಲ್ ಉಪವಿಭಾಗದ ಸರ್ಜಾಪುರ, ಆನೇಕಲ್, ಸೂರ್ಯ ನಗರ, ಜಿಗಣಿ ಸೇರಿದಂತೆ ಹಲವೆಡೆ ಅಪರಾಧಿ ಪ್ರಕರಣಗಳು ಹೆಚ್ಚಾಗಿದ್ದು ಮುಂಜಾಗ್ರತ ಕ್ರಮವಾಗಿ ಪೋಲಿಸ್ ಗಸ್ತು ಮಾಡಲಾಗಿದೆ. ಕಾನೂನು ಉಲ್ಲಂಘಿಸುವವ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅತ್ತಿಬೆಲೆ ಇನ್ಸ್ಪೆಕ್ಟರ್ ವಿಶ್ವನಾಥ್ ಮಾಹಿತಿ ಹಂಚಿಕೊಂಡರು.
ಅತ್ತಿಬೆಲೆ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾರುಕಟ್ಟೆ, ಬಸ್ ನಿಲ್ದಾಣ, ದೇವಸ್ಥಾನ, ಶಾಲಾ ಕಾಲೇಜುಗಳು ಜನದಟ್ಟನೆ ಸ್ಥಳಗಳಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಸೂಚನೆಯನ್ನು ನೀಡಲಾಗುತ್ತಿದೆ. ಕರ್ಕಶವಾಗಿ ಬೈಕ್ಗಳ ಸದ್ದು ಮಾಡುವವರಿಗೂ ಸಹ ಎಚ್ಚರಿಕೆ ನೀಡಲಾಗುತ್ತಿದೆ.
ಜನಸಾಮಾನ್ಯರಿಗೆ ತೊಂದರೆಕೊಡುವಂತಹವರು ಯಾರೇ ಆಗಿದ್ದರೂ ಅಂತವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ.