ಸುದ್ದಿಮೂಲ ವಾರ್ತೆ
ತುಮಕೂರು, ಏ.21: ಬಸವ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಏ.22ರ ಸಂಜೆ 5 ಗಂಟೆಯಿಂದ ಏ.23ರ ಮಧ್ಯರಾತ್ರಿ 12 ಗಂಟೆವರೆಗೆ ಮಾಂಸ ಮಾರಾಟ ಮತ್ತು ಸಂಗ್ರಹಣೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿಖಾನೆ ಹಾಗೂ ಎಲ್ಲ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚಬೇಕು ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ. ಮದಕರಿ ನಾಯಕ ಅವರು ತಿಳಿಸಿದ್ದಾರೆ.