ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.04:
ಡಿಸೆಂಬರ್ 7ರ ಭಾನುವಾರ ನಡೆಯುವ ಶಿಕ್ಷಕರ ಅರ್ಹತಾ (ಟಿಇಟಿ) ಪರೀಕ್ಷೆಯು ಬಳ್ಳಾಾರಿ ನಗರದ 20 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 9339 ಅಭ್ಯರ್ಥಿಗಳು ಹೆಸರು ನೋಂದಣಿ ಆಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾಾರೆ.
ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಮೊದಲ ಅಧಿವೇಶನದಲ್ಲಿ 2339 ಮತ್ತು ಎರಡನೇ ಅಧಿವೇಶನದಲ್ಲಿ 7000 ಅಭ್ಯರ್ಥಿಗಳು ಸೇರಿ ಒಟ್ಟು 9339 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸರ್ವ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾಾರೆ.
ಮೊದಲ ಅಧಿವೇಶನ ಅಂದು ಬೆಳಿಗ್ಗೆೆ 9.30 ರಿಂದ ಮಧ್ಯಾಾಹ್ನ 12 ಗಂಟೆಯವರೆಗೆ 06 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಎರಡನೇ ಅಧಿವೇಶನ ಮಧ್ಯಾಾಹ್ನ 02 ರಿಂದ ಸಂಜೆ 4.30 ರವರೆಗೆ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆ ಪ್ರಾಾರಂಭಕ್ಕಿಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹಾಜರಿರಬೇಕು ಎಂದರು.
ಪರೀಕ್ಷೆ ಪ್ರವೇಶ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.
ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿಿನ ಕಾಲಾವಕಾಶ ನೀಡಿದೆ. ಆನ್ ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾಾರೆ.

