ಸುದ್ದಿಮೂಲ ವಾರ್ತೆ ,
ಬಳ್ಳಾರಿ, ಏ. ೦೬:
ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಪಕ್ಷದ ಕಾರ್ಯಾಲಯದಲ್ಲಿಂದು ಆಚರಿಸಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರಉ ದೇಶದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿರುವ ನೇರಪ್ರಸಾರದ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.
ಈ ವೇಳೆ ಮಾತನಾಡಿದ ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿಯವರು ಬಿಜೆಪಿ ದೇಶಕ್ಕೆ ಮತ್ತು ಜನತೆಗೆ ವಿಶ್ವಾಸಾರ್ಹ ಪಕ್ಷ. ಭರವಸೆಯ ರಾಷ್ಟ್ರೀಯ ಪಕ್ಷ. ದೇಶಕ್ಕಾಗಿ ತ್ಯಾಗ ಮಾಡಿದ ನಾಯರಕನ್ನು ಒಳಗೊಂಡಿರುವ ಪಕ್ಷ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳು ಮುರಹರಗೌಡ, ಶಾಸಕ ಜಿ. ಸೋಮಶೇಖರ ರೆಡ್ಡಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡರವರು, ಜಿಲ್ಲಾ ಉಪಾಧ್ಯಕ್ಷ ಜಿ. ವೀರಶೇಖರ ರೆಡ್ಡಿ, ಕಾರ್ಪೊರೇಟರ್ ಶ್ರೀನಿವಾಸ್ ಮೋತ್ಕರ್ ಸೇರಿಂತೆ ಪಕ್ಷದ ವಿವಿಧ ಘಟಕದ ಮುಖಂಡರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.