ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.08:
ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾಾರಿ ವಿಭಾಗೀಯ ಕಚೇರಿಯ ಉದ್ಘಾಾಟನಾ ಸಮಾರಂಭ ಕಾರ್ಯಕ್ರಮ ಡಿಸೆಂಬರ್ 13ರ ಶನಿವಾರ ಬೆಳಿಗ್ಗೆೆ 11 ಗಂಟೆಗೆ ನಗರದ ಹಳೆಯ ನ್ಯಾಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ನಡೆಯಲಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನೂತನ ಕಚೇರಿಯ ಉದ್ಘಾಾಟನೆ ನೆರವೇರಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ನೊಂದವರಿಗೆ ನ್ಯಾಾಯ ಜಾಗೃತಿ ಅಭಿಯಾನ ಉದ್ಘಾಾಟಿಸುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾಾತರ ಕಲ್ಯಾಾಣ ಸಚಿವರು ಹಾಗೂ ಬಳ್ಳಾಾರಿ ಜಿಲ್ಲಾಾ ಉಸ್ತುವಾರಿ ಸಚಿವ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ನ್ಯಾಾಯ ಜ್ಯೋೋತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮಾಜಿ ಸಚಿವರು ಹಾಗೂ ಬಳ್ಳಾಾರಿ ಗ್ರಾಾಮೀಣ ಶಾಸಕ ಬಿ.ನಾಗೇಂದ್ರ ಅವರು ವಿಭಾಗೀಯ ಕಚೇರಿಯ ವೆಬ್ ಸೈಟ್ ಗೆ ಚಾಲನೆ ನೀಡುವರು.
ಬಳ್ಳಾಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

