ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.27: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟ ಸಂಯೋಜಿತ ಕಾಲೇಜುಗಳಿಂದ 2023-24 ನೇ ಶೈಕ್ಷಣಿಕ ಸಾಲಿಗೆ ಸಂಯೋಜನೆ ಮುಂದುವರಿಕೆ, ಹೊಸ ಕಾಲೇಜು ಪ್ರಾರಂಭ ಅಸ್ತಿತ್ವದಲ್ಲಿರುವ ಕಾಲೇಜುಗಳಲ್ಲಿ ಹೊಸ ಕೋರ್ಸು ವಿಷಯ, ಹೆಚ್ಚುವರಿ ವಿದ್ಯಾರ್ಥಿ ಪ್ರಮಾಣ, ಶಾಶ್ವತ ಸಂಯೋಜನೆ ಇತ್ಯಾದಿಗಳಿಗೆ ಯುಯುಸಿಎಂಎಸ್ ತಂತ್ರಾಂಶವನ್ನು ಅಳವಡಿಸಿಕೊಂಡು ಎನ್ಇಪಿ -2020 ರಂತೆ ಸಂಯೋಜನಾ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಶ್ವವಿದ್ಯಾನಿಲಯಕ್ಕೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕವಾಗಿದೆ ಎಂದು ಕುಲಸಚಿವರ ಪ್ರಕಟಣೆಯಲ್ಲಿ ತಿಳಿಸಿದೆ.