ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.23:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಇಂದು ರಾತ್ರಿಿ ಬಿಹಾರದ ರಾಜಧಾನಿ ಪಾಟ್ನಾಾಗೆ ತೆರಳಿದ್ದಾರೆ.
ನಾಳೆ ಪಾಟ್ನಾಾದಲ್ಲಿ ನಡೆಯುವ ಅಖಿಲ ಭಾರತ ಕಾಂಗ್ರೆೆಸ್ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊೊಳ್ಳಲಿದ್ದಾರೆ. ನಂತರ ಅಲ್ಲಿಂದ ಮೂರು ಗಂಟೆಗೆ ಮೈಸೂರಿಗೆ ಆಗಮಿಸುವರು.
ನಾಳೆ ಬಿಹಾರದಲ್ಲಿ ನಡೆಯಲಿರುವ ಕಾರ್ಯಕಾರಣಿ ಸಭೆ ಮಹತ್ವದ್ದಾಗಿದ್ದು ಬರುವ ನವೆಂಬರ್ನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಹಿನ್ನೆೆಲೆಯಲ್ಲಿ ನಾಳೆ ಕಾರ್ಯಕಾರಣಿ ಸಭೆಯಲ್ಲಿ ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ.
ಬಿಹಾರ ವಿಧಾನಸಭೆಯ ಪ್ರಮುಖ ಪ್ರತಿಪಕ್ಷ ಆರ್ಜೆಡಿ ಮತ್ತು ಕಾಂಗ್ರೆೆಸ್ ಪಕ್ಷ ಚುನಾವಣಾ ಮೈತ್ರಿಿ ಮಾಡಿಕೊಂಡಿದ್ದು ಸೀಟು ಹಂಚಿಕೆ ಸೇರಿದಂತೆ ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಯಾವ ರೀತಿ ರಣನೀತಿ ರೂಪಿಸಬೇಕು ಎನ್ನುವ ಚರ್ಚೆಗಳು ಈ ಸಭೆಯಲ್ಲಿ ನಡೆಯಲಿವೆ.
ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಕಾಂಗ್ರೆೆಸ್ ಸರ್ಕಾರದ ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್, ಕಾಂಗ್ರೆೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಿಗಳು, ಪಿಸಿಸಿ ಅಧ್ಯಕ್ಷರು ಮತ್ತು ಆಯಾ ರಾಜ್ಯಗಳ ವಿಧಾನಸಭೆಯ ಪ್ರತಿಪಕ್ಷದ ನಾಯಕರುಗಳು ಮತ್ತು ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

