ಸುದ್ದಿಮೂಲ ವಾರ್ತೆ
ಆನೇಕಲ್, ಜು 6 : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಘಟನೆ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಸವಣ್ಣ ಬೀದಿಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಬಸವಣ್ಣ ಬೀದಿಯಲ್ಲಿ ಭಾನುವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಖದೀಮರು ಜಗದೀಶ್ ಎಂಬುವರ ಮನೆ ಮುಂದೆ ಆರ್ ಎಕ್ಸ್ 100 ಬೈಕನ್ನು ನಿಲ್ಲಿಸಿದ್ದರು.
ಬೆಳಗಿನ ಜಾವ ಮೂರು ಗಂಟೆಗೆ ಇಬ್ಬರು ಖದೀಮರು ಬೈಕ್ ಅನ್ನು ಕದ್ದು ಪರಾರಿಯಾಗಿದ್ದಾರೆ ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಕಳ್ಳತನ ಆಗಿರುವುದಾಗಿ ತಿಳಿಯಿತು. ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಕಾಣಲಿಲ್ಲ. ಇನ್ನು ಮನೆ ಮುಂದೆ ಇದ್ದ ಸಿಸಿಟಿವಿಯನ್ನ ಪರಿಶೀಲನೆ ಮಾಡಿದಾಗ ಕಳ್ಳತನವಾಗಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.