ಸುದ್ದಿಮೂಲ ವಾರ್ತೆ
ಬೆಂಗಳೂರು,ಅ.4: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ಶ್ರೀ ನಳಿನ್ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಗಲಭೆ ನಡೆದ ರಾಗಿಗುಡ್ಡಕ್ಕೆ 5.10.2023ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ತಮ್ಮ (ನಳಿನ್ಕುಮಾರ್ ಕಟೀಲ್) ನೇತೃತ್ವದ ಈ ತಂಡದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಕೆ.ಎಸ್.ಈಶ್ವರಪ್ಪ, ಡಾ.ಸಿ.ಎನ್. ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ, ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್.ರವಿಕುಮಾರ್, ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡ, ಶ್ರೀ ಡಿ.ಎಸ್. ಅರುಣ್, ಶ್ರೀಮತಿ ಭಾರತಿ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.