ಅಗರ್ತಲಾ, ಮಾ.30: ತ್ರಿಪುರಾ ವಿಧಾನಸಭಾ ಅಧಿವೇಶನದ ವೇಳೆ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ಅವರು ನೀಲಿ ಚಿತ್ರ ವೀಕ್ಷಣೆ ಮಾಡಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿವೆ.
ತ್ರಿಪುರಾದಲ್ಲಿ ರಾಜ್ಯ ಬಜೆಟ್ ಅಧಿವೇಶನ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಬಾಗ್ಬಾಸ ಕ್ಷೇತ್ರದ ಶಾಸಕ ಜಬಾದ್ ಅವರು ಮೊಬೈಲ್ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿರುವುದು ವಿಡಿಯೊಗಳಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಕೇವಲ ಒಂದು ಆಕಸ್ಮಿಕವಾಗಿ ನೋಡಿದಂತೆ ಕಾಣುತ್ತಿಲ್ಲ. ಬದಲು ಹಲವು ವೀಡಿಯೋಗಳನ್ನು ನೋಡುತ್ತಿರುವುದು ಕಂಡುಬಂದಿದೆ.
ಕರ್ನಾಟಕದಲ್ಲಿಯೂ ಸಹ 2012ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇಬ್ಬರು ಸಚಿವರು ಮತ್ತು ಒಬ್ಬ ಶಾಸಕ ಅಧಿವೇಶನ ನಡೆಯುತ್ತಿರುವ ವೇಳೆಯೇ ನೀಲಿ ಚಿತ್ರ ವೀಕ್ಷಣೆ ಮಾಡಿದ್ದರು.