ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.26:
ಬಿಜೆಪಿ ಚುನಾಯಿತ ಸದಸ್ಯರ ತೀವ್ರ ವಿರೋಧದ ನಡುವೆ ಏಕ ಪಕ್ಷೀಯವಾಗಿ ನಿರ್ಣಯ ತೆಗೆದುಕೊಂಡು ರಾಜ್ಯ ಸರಕಾರ ಅನುಷ್ಠಾಾನಕ್ಕೆೆ ತರುತ್ತಿಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ರೀತಿಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯಿದೆ ಜಾರಿ ಮಾಡುತ್ತಿಿದ್ದಾರೆ. ವಿರೋಧ ಪಕ್ಷಗಳ ಜತೆ ವಿಧಾನಸಭೆಯಲ್ಲಿ ಪೂರ್ಣ ಪ್ರಮಾಣದ ಚರ್ಚೆಯೂ ನಡೆಸದೆ ಮಂಡನೆ ಮಾಡಿರುವುದು ಖಂಡನೀಯವಾಗಿದೆ ಎಂದರು.
ಸಂವಿಧಾನ ವಿರೋಧಿ ಕಾಯಿದೆಯನ್ನು ರಾಜ್ಯ ಸರಕಾರ ಜಾರಿ ಮಾಡುತ್ತಿಿರುವುದು ಅಭಿವ್ಯಕ್ತಿಿ ಸ್ವಾಾತಂತ್ರ್ಯದ ಉಲ್ಲಂಘನೆಯಾಗಿದೆ. ಬಾಬಾ ಸಾಹೇಬರು ನೀಡಿದ ಸಂವಿಧಾನದತ್ತ ಅಧಿಕಾರವನ್ನು ಕಾಂಗ್ರೆೆಸ್ ಸರ್ಕಾರ ಕಿತ್ತುಕೊಳ್ಳುತ್ತಿಿದೆ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಶಾಸಕರಾದ ಬಸವರಾಜ್ ಮತ್ತಿಿಮಡು, ಡಾ.ಅವಿನಾಶ ಜಾಧವ್, ಮಾಜಿ ಸಂಸದ ಡಾ.ಉಮೇಶ ಜಾಧವ್, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಗ್ರಾಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗಿರಿರಾಜ್ ಯಳಮೇಲಿ, ಶಿವಯೋಗಿ ನಾಗನಳ್ಳಿಿ, ಶಶಿಕಲಾ ಟೆಂಗಳಿ, ಸಂತೋಷ ಹಾದಿಮನಿ, ಶಾಂತು ಧುದನಿ ಇತರರಿದ್ದರು.
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಪ್ರತಿಭಟನೆ

