ಸುದ್ದಿಮೂಲ ವಾರ್ತೆ ಬೆಂಗಳೂರು , ಸೆ.29:
ಕಾಂಗ್ರೆೆಸ್ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾಾರಂಭಿಸುತ್ತಿಿದ್ದಂತೆಯೇ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿಿದ್ದಾರೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಆಕ್ರೋೋಶ ವ್ಯಕ್ತಪಡಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ. ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ.
ಸಂಪತ್ತು, ಅವಕಾಶ ಮತ್ತು ಪ್ರಾಾತಿನಿಧ್ಯ ಎಲ್ಲವೂ ಯಥಾಸ್ಥಿಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು ಎಂಬುದು ಅವರ ನಿರ್ಧಾರ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಬಾಕ್ಸ್
ಸಮೀಕ್ಷೆಯಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕುವುದು ಕೋರ್ಟ್ ಆದೇಶಕ್ಕೆೆ ವ್ಯತಿರಿಕ್ತ
ಬಿಜೆಪಿಯ ಕೆಲವು ನಾಯಕರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿಿರುವುದು ಸಮೀಕ್ಷೆ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್ ಹೇಳಿದರು.
ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಸ್ಥಿಿತಿಗತಿಗಳ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಮತ್ತು ಅವರ ಕಲ್ಯಾಾಣ ಹಾಗೂ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿ, ಅಭಿವೃದ್ಧಿಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲು, ಶಾಸನಬದ್ಧ ನಿಯಮಾವಳಿಗಳನ್ವಯ ಸದರಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿಿದೆ. ಜನಪ್ರತಿನಿಧಿಗಳ ಸಾರ್ವಜನಿಕ ಹೇಳಿಕೆಗಳು ಸಮೀಕ್ಷೆಯಲ್ಲಿ ಜನರು ಭಾಗವಹಿಸದಂತೆ ಪ್ರಚೋದಿಸುತ್ತಿಿದ್ದು, ಸಾರ್ವಜನಿಕ ಹಿತಕ್ಕಾಾಗಿ ಕೈಗೊಳ್ಳಲಾದ ಸಮೀಕ್ಷೆಯ ಉದ್ದೇಶಕ್ಕೆೆ ವಿರುದ್ಧವಾಗಿವೆ. ನಾಗರಿಕರು ಯಾವುದೇ ಬಲವಂತವಿಲ್ಲದೆ ಸ್ವಇಚ್ಛೆೆಯಿಂದ ಸಮೀಕ್ಷೆಯಲ್ಲಿ ಭಾಗವಹಿಸುತ್ತಿಿರುವ ಸಂದರ್ಭದಲ್ಲಿ, ಅವರ ಭಾಗವಹಿಸುವಿಕೆಯನ್ನು ತಡೆಯುವ ಇಂತಹ ಹೇಳಿಕೆಗಳು ಸಾರ್ವಜನಿಕ ಹಿತಾಸಕ್ತಿಿಗೆ ವಿರುದ್ಧವಾಗಿರುತ್ತದೆ ಎಂದು ಅವರು ಆಕ್ರೋೋಶ ವ್ಯಕ್ತಪಡಿಸಿದರು.
ಈ ರೀತಿಯ ಹೇಳಿಕೆಗಳಿಂದ ಸಾರ್ವಜನಿಕರಿಗೆ ತಪ್ಪುು ಸಂದೇಶ ತಲುಪುವ ಸಾಧ್ಯತೆ ಇರುವ ಕಾರಣ ಹಾಗೂ ಇದು ಮಾನ್ಯ ನ್ಯಾಾಯಾಲಯದ ಆದೇಶದ ಆಶಯಕ್ಕೆೆ ವ್ಯತಿರಿಕ್ತವಾಗಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ನೀಡದಿರುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್ ತಿಳಿಸಿದ್ದಾರೆ.

