ಸುದ್ದಿಮೂಲ
ಚಿಕ್ಕಬಳ್ಳಾಪುರ,ಜೂನ್05 : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮತ್ತು ಹಾಲಿನ ಪ್ರೋತ್ಸಾಹಧನವನ್ನು ಇಳಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶಿಡ್ಲಘಟ್ಟ ಸರ್ಕಲ್ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶಗಳನ್ನು ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 5 ಗ್ಯಾರಂಟಿಗಳನ್ನು ನೀಡುವ ನೆಪದಲ್ಲಿ ರಾಜ್ಯದ ಜನರಿಗೆ ಮೋಸ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು ವಿದ್ಯುತ್ ದರವನ್ನು ಏರಿಕೆ ಮಾಡಿದ್ದಾರೆ ಜೊತೆಗೆ ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಕಡಿತಗೊಳಿಸಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ಕೆ.ವಿ.ನಾಗರಾಜ್, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ. ರಾಜಣ್ಣ, ಭಾಜಪ ಮುಖಂಡ ಸೀಕಲ್ ರಾಮಚಂದ್ರಗೌಡ, ಕಾಂತ್ರಾಜ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮೀಪತಿ, ಚಿಕ್ಕಬಳ್ಳಾಪುರ ನಗರ ಮಂಡಲ ಅಧ್ಯಕ್ಷ ಆನಂದ್(ಅನು), ಮಾಧ್ಯಮ ಪ್ರಮುಖ ವಿ.ಮಧುಚಂದ್ರ, ಬೈರೇಗೌಡ, ಬಾಗೇಪಲ್ಲಿ ಮಂಡಲ ಅಧ್ಯಕ್ಷ ಪ್ರತಾಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅರುಣ್ಬಾಬು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುಧ್ಧಿಚಿತ್ರ,ಜೂನ್05 ಸಿಕೆಬಿಪಿ02 ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುಧ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.