ಅಧಿಕಾರದಲ್ಲಿದ್ದಾಗ ಭ್ರಷ್ಟಾಾಚಾರ ನಡೆಸಿ ಬಂದ ಹಣವನ್ನು ರಾಷ್ಟ್ರದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಳಕೆ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಿ ಟೀಕಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕ ಬಿಜೆಪಿ ಸುಳ್ಳಿಿನ ಕಾರ್ಖಾನೆ, ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆೆಸ್ ಸರ್ಕಾರ ಹಣ ನೀಡುತ್ತಿಿದೆ ಎಂಬ ಆರೋಪ ಕಪೋಲಕಲ್ಪಿಿತ ಎಂದಿದ್ದಾರೆ.
ಚುನಾವಣೆಗೆ ಭ್ರಷ್ಟಾಾಚಾರದ ಹಣ ಬಳಕೆ ಮಾಡುವುದು ನಿಮ್ಮ ಜಾಯಮಾನ, ಕಾಂಗ್ರೆೆಸ್ನದ್ದಲ್ಲ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆೆಸ್ ಅಧಿಕಾರಕ್ಕೆೆ ಬಂದಾಗಲೆಲ್ಲಾ ಜನಪರ ಕಾರ್ಯಗಳಿಗೆ ಒತ್ತು ನೀಡಿದ್ದೇವೆಯೇ ಹೊರತು ನಿಮ್ಮ ರೀತಿ ಭ್ರಷ್ಟಾಾಚಾರಕ್ಕಲ್ಲ ಎಂದಿದ್ದಾರೆ.
ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಾಯಿ ಆಡಳಿತಾವಧಿಗಳಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ರಾಷ್ಟ್ರದ ಬಹುತೇಕ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆದವು. ಅಂದು ಕರ್ನಾಟಕದ ಸಂಪತ್ತನ್ನು ಈ ಚುನಾವಣೆಗಳಿಗೆ ನೀವೆಲ್ಲರೂ ಕಳುಹಿಸಿದ್ದಿರಾ, ಜನತೆಯ ಮುಂದೆ ಉತ್ತರಿಸಿ ಎಂದಿದ್ದಾರೆ.
ಹಣದ ಹೊಳೆ ಹರಿಸಿ ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊೊಲೆ ಮಾಡಿದ ಪಿತಾಮಹರು ನೀವು. ಭ್ರಷ್ಟಾಾಚಾರದ ಗಂಗೋತ್ರಿಿಯಾದ ನೀವು ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ನಾಚಿಕೆಗೇಡಿನ ವಿಷಯ. ಅಧಿಕಾರಕ್ಕಾಾಗಿ ನೀವು ಖರೀದಿಸಿದ ಕ್ರಿಿಮಿನಲ್ ಹಿನ್ನೆೆಲೆ ಶಾಸಕರನ್ನು ರಾಜ್ಯದ ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಗುತ್ತಿಿಗೆದಾರರು ಶೇಕಡ 40ರಷ್ಟು ಕಮಿಷನ್ ಆರೋಪ ಮಾಡಿದ್ದು ನಿಮ್ಮ ಆಡಳಿತಾವಧಿಯಲ್ಲೇ ಅಲ್ಲವೆ. ಅಷ್ಟೇ ಅಲ್ಲ, ಒಂದು ಹೆಜ್ಜೆೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು ನಿಮ್ಮ ಸರ್ಕಾರದ ಭ್ರಷ್ಟಾಾಚಾರವನ್ನು ಜಗಜ್ಜಾಾಹೀರು ಮಾಡಿದ್ದನ್ನು ಮರೆತಿದ್ದೀರಾ.
ನಮ್ಮ ಕಾಂಗ್ರೆೆಸ್ ಸರ್ಕಾರ ಗ್ಯಾಾರಂಟಿಗಳ ಮೂಲಕ ರಾಜ್ಯದ ಬಡವರ ಖಾತೆಗೆ ನೇರವಾಗಿ ಹಣ ಜಮೆ ಮಾಡುತ್ತಿಿದೆ, ನಿಮ್ಮಂತೆ ಚುನಾವಣಾ ಬಾಂಡ್ಗಳ ಹೆಸರಿನಲ್ಲಿ ಕಪ್ಪುು ಹಣವನ್ನು ಬಿಳಿ ಮಾಡುವ ಚಾಳಿ ನಮಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇಂದು ಎಲ್ಲಾ ದೇವಾಲಯಗಳಲ್ಲಿ ಗೋಪೂಜೆಗೆ ಸೂಚನೆ
ಧಾರ್ಮಿಕ ದತ್ತಿಿ ಇಲಾಖೆಯ ವ್ಯಾಾಪ್ತಿಿಗೆ ಒಳಪಡುವ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ನಡೆಸಲು ಸುತ್ತೋೋಲೆ ಹೊರಡಿಸಲಾಗಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾಾನಮಾನವನ್ನು ನೀಡಿ ಪೂಜಿಸಲಾಗುತ್ತಿಿದೆ . ಈ ಹಿನ್ನೆೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆೆ, ಜನ ಜಾಗೃತಿ ಮೂಡಿಸಬೇಕಾಗಿದೆ.
ಆದ್ದರಿಂದ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾಾನ ಮಾಡಿಸಿ ಅರಿಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ, ಅಕ್ಕಿಿ, ಬೆಲ್ಲ ಹಣ್ಣು ಮುಂತಾದ ಗೋಗ್ರಾಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಿಗೊಳಿಸಲು ಸೂಚನೆ ನೀಡಲಾಗಿದೆ.