ಸುದ್ದಿಮೂಲ ವಾರ್ತೆ
ಮೈಸೂರು, ಜು.29: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಳಿ ಇರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ನ ಪೈಪ್ ಸ್ಫೋಟಗೊಂಡು ಅಪ್ಪಾಜಿ ಎಂಬ ನೌಕರನಿಗೆ ತೀವ್ರತರದ ಸುಟ್ಟ ಗಾಯಗಳಾಗಿದ್ದು, ಅವರನ್ನು ಜೆಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ಖಾನೆ ಬಾಯ್ಲರ್ ಗಳನ್ನು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ . ಆದ್ದರಿಂದ ಇಂತಹ ಘಟನೆಗಳು ನಡೆಯುತ್ತಲೇ ಇವೆ ಎಂದು ಕಾರ್ಮಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.