ಸುದ್ದಿಮೂಲ ವಾರ್ತೆ
ನವದೆಹಲಿ,ಏ.11: ಬಿಜೆಪಿ ಅಭ್ಯರ್ಥಿಗಳ ಮೊದಲನೇ ಪಟ್ಟಿ ಇಂದೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಂಜೆಯೊಳಗೆ ಪಟ್ಟಿ ಬಿಡುಗಡೆಯ ನಿರೀಕ್ಷೆಯನ್ನು ಇಟ್ಟುಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ನಿನ್ನೆ ತಡರಾತ್ರಿಯವರೆಗೂ ಸಭೆ ನಡೆದಿದ್ದು, ಇಂದೇ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಮೊದಲನೇ ಪಟ್ಟಿಯಲ್ಲಿ 170 ರಿಂದ 180 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ ಆಗಬಹುದು ಎಂದು ತಿಳಿಸಿದ್ದಾರೆ.
ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೆ ಸಂಬಂಧ ನಿನ್ನೆ 4 ಸಭೆಗಳು ನಡೆಸಿದ್ದು ತಡರಾತ್ರಿ 1 ಗಂಟೆಯವರೆಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ಟಿಕೆಟ್ ಆಯ್ಕೆ ವಿಚಾರದಲ್ಲಿ ತೆಗೆದುಕೊಂಡಿರುವ ಕೆಲವು ತೀರ್ಮಾನಗಳ ಕುರಿತು ವಿವರಿಸಿದ ಅವರು, ಒಂದು ಕುಟುಂಬದಿಂದ ಒಬ್ಬರಿಗೆ ಟಿಕೆಟ್ ನೀಡಲಾಗುತ್ತದೆ. ಒಂದೇ ಮನೆಯಲ್ಲಿ ಅಪ್ಪ-ಮಗನಿಗೆ ಟಿಕೆಟ್ ನೀಡುವಂತ್ತಿಲ್ಲ. ಕೆಲವು ಹಾಲಿ ಶಾಸಕರನ್ನು ಕೈ ಬಿಡಟ್ಟು, ಅಂತಹ ಕ್ಷೇತ್ರಗಳಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ. ಇಂದು ಸಂಜೆ ಮತ್ತೊಂದ್ದು ಸಭೆಯನ್ನು ಏರ್ಪಡಿಸಿದ್ದು ಸಭೆಯ ನಂತರ ಸಂಜೆ 5 ರಿಂದ 7 ಗಂಟೆಯೊಳಗೆ ಪಟ್ಟಿ ಹೊರಬಿಳುವ ಸಾಧ್ಯತೆ ಇದೆ ಎಂದು ಮಾಹಿತಿನೀಡಿದ್ದಾರೆ .
ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದ್ದಾರೆ. ಟಿಕೆಟ್ ಹಂಚಿಕೆಯ ನಂತರ ಕೆಲವು ಶಾಸಕರಿಗೆ ಅಸಮಾಧಾನವಾಗುವ ಸಾಧ್ಯತೆ ಇದ್ದು ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗುತ್ತಾರೆ. ಆದರಿಂದ ಅಂತಹ ಅಭ್ಯರ್ಥಿಗಳು ಪಕ್ಷ ಬಿಟ್ಟು ಹೋಗದ ರೀತಿಯಲ್ಲಿ ನೋಡಿಕೊಳ್ಳುವುದರ ಜೊತೆಗೆ ಯಾವುದೇ ರೀತಿಯಾದಂತಹ ಪಕ್ಷದ ವಿರುದ್ದ ಕೆಲಸ ಮಾಡದ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಭಿನ್ನ ಧ್ವನಿ ಎತ್ತುವವರ ಬಗ್ಗೆ ನಿಗಾ ವಹಿಸಬೇಕು. ಅಸಮಾಧಾನಗೊಂಡ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.