ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ಆ.9: ಕ್ರೀಡೆಯಿಂದ ಮನುಷ್ಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳ್ಳುವ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕಾರಿಯಾಗುತ್ತದೆ ಎಂದು ಕೆವಿ ಟ್ರಸ್ಟ್ ಅಧ್ಯಕ್ಷ ಕೆ.ವಿ ನವೀನ್ ಕಿರಣ್ ಅಭಿಪ್ರಾಯವ್ಯಕ್ತಪಡಿಸಿದರು.
ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಆಯೋಜಿಸಿದ್ದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕೆ.ವಿ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಪಾಠ ಪ್ರವಚನಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಸಹ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಅದಕ್ಕೆ ಶಿಕ್ಷಣ ಸಂಸ್ಥೆಯು ಪೂರಕವಾಗಿ ಸಹಕಾರ ಮತ್ತು ಪ್ರೋತ್ಸಾಹ ನೀಡುತ್ತಿದೆ ಎಂದರು.
ಬೆಂಗಳೂರಿನ ರಾಜೀವ್ಗಾಂಧಿ ವಿಶ್ವವಿದ್ಯಾಲಯವು ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಆಯೋಜಿಸಿದ್ದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಗಳಲ್ಲಿ 70 ತಂಡಗಳು ಭಾಗವಹಿಸಿದ್ದವು. ಈ ಪೈಕಿ ಚಿಕ್ಕಬಳ್ಳಾಪುರದ ಕೆವಿ ಕಾಲೇಜ್ ಆಫ್ ಫಾರ್ಮಸಿಯ ವಿದ್ಯಾರ್ಥಿಗಳು ಅತ್ಯುತ್ತಮ ಆಟವನ್ನು ಪ್ರದರ್ಶನ ಮಾಡುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ವಿಜಯ ತಂಡದ ಎಲ್ಲಾ ಸದಸ್ಯರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕೆವಿ ಸತೀಶ್, ಉಪನ್ಯಾಸಕ ಡಾ. ಎಲ್ ಪ್ರದೀಪ್ ಹಾಗೂ ವಾಲಿಬಾಲ್ ತಂಡದ ವಿಜೇತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು