ಸುದ್ದಿಮೂಲ ವಾರ್ತೆ
ಬೆಂಗಳೂರು ನಗರ ಜಿಲ್ಲೆ, ಏ.3: ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶಿಶು ಅಭಿವೃದ್ದಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಬರುವ 71 ಅಂಗನವಾಡಿ ಕಾರ್ಯಕರ್ತರ ಹುದ್ದೆ ಹಾಗೂ 80 ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಮಾ.24 ರಂದು ಹೊರಡಿಸಿರುವ ಪ್ರಕಟಣೆಯನ್ನು ರದ್ದುಗೊಳಿಸಲಾಗಿದೆ.
ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಹೊಸ ಅಧಿಸೂಚನೆ ಹೊರಡಿಸಲಾಗುವುದು ಎಂದು ಬೆಂಗಳೂರು ರಾಜ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ರಾಜ್ಯ ಯೋಜನೆ, ಒಂದನೇ ಮಹಡಿ, ಬಿಬಿಎಂಪಿ ಕಟ್ಟಡ, ಹೇರಿಗೆ ಆಸ್ಪತ್ರೆ ಪಕ್ಕ, ಎನ್,ಆರ್, ಕಾಲೋನಿ, ಬೆಂಗಳೂರು ನಗರ, ಬೆಂಗಳೂರು-560004, ದೂರವಾಣಿ ಸಂಖ್ಯೆ- 080 26601917 ನ್ನು ಸಂಪರ್ಕಿಸಬಹುದಾಗಿದೆ.