ಸುದ್ದಿಮೂಲ ವಾರ್ತೆ
ಆನೇಕಲ್,ಆ.22: ಕೆಟ್ಟು ನಿಂತಿದ್ದ ಮಹೇಂದ್ರ ಪಿಕಪ್ ಗಾಡಿಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೊಲೊರ್ ಟೆಂಪೋ ಪಿಕಪ್ ನಲ್ಲಿದ್ದ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಕೋನಪ್ಪನ ಅಗ್ರಹಾರ ಎಲಿವೇಟೆಡ್ ಫ್ಲೈಓವರ್ ಮೇಲೆ ನಡೆದಿದೆ.. ಇನ್ನು ಈ ಘಟನೆ ತಡರಾತ್ರಿ 11:30ಕ್ಕೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಂಟರ್ ಚಾಲಕ ಮನ್ಸೂರ್ ಹಾಗೂ ಬೊಲೇರೊ ಚಾಲಕ ಹರೀಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟೋಯಿಂಗ್ ಮಾಡುವ ವೇಳೆ ಈ ಘಟನೆ ಸಂಭವಿಸಿದೆ ಅಥವಾ ಅತಿ ವೇಗವಾಗಿ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಯಿತೆ ಎಂಬುದರ ಬಗ್ಗೆ ಪೊಲೀಸು ತನಿಖೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ಲೈ ಓವರ್ ಮೇಲೆ ಟ್ರಾಫಿಕ್ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.