ಸುದ್ದಿಮೂಲ ವಾರ್ತೆ
ತುಮಕೂರು, ಅ. 29 : ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಹೊರಟಿದ್ದವರ ಕಾರು ಕೆರೆಗೆ ಬಿದ್ದು, ಒಂದೇ ಕುಟುಂಬದ ಮೂವರು ನೀರುಪಾಲಾಗಿದ್ದಾರೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಸಮೀಪದ ರಾಮಲಿಂಗಾಪುರ ಬಳಿಯ ಕೆರೆಯಲ್ಲಿ ಕಾರು ಬಿದ್ದ ಘಟನೆ ಬೆಳಗಿನ ಜಾವ ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರವೀಣ್ ಎಂಬ ವ್ಯಕ್ತಿಯು ಪಾರಾಗಿದ್ದಾರೆ. ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ, ಅತ್ತೆ ಸಣ್ಣಮ್ಮ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಎಲ್ಲರೂ ಶಿರಾ ತಾಲೂಕಿನ ವೀರಾಪುರ ಗ್ರಾಮದವರಾಗಿದ್ದಾರೆ.
ಮಾರುತಿ ಆಲ್ಟೊ ಕಾರಿನಲ್ಲಿ ವೀರಾಪುರ ಗ್ರಾಮದಿಂದ ನಾಲ್ವರೂ ಧರ್ಮಸ್ಥಕ್ಕೆ ತೆರಳುತ್ತಿದ್ದರು. ಮಂಜುನಾಥನ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಶಿರಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಮೂವರ ಶವಗಳನ್ನು ಹೊರೆತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.