ಸುದ್ದಿಮೂಲ ವಾರ್ತೆ
ಕೆ.ಆರ್.ಪುರ: ಅ.20 :ಇಲ್ಲಿನ ಸಮೀಪದ ಹೊರಮಾವಿನಲ್ಲಿ ಬಿಜೆಪಿ ಮುಖಂಡ ವಿಡಿಎಸ್ ಪ್ರದೀಪ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಬೈರತಿ ಬಸವರಾಜ ವಿಶೇಷ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ದುರ್ಗಾ ಪೂಜೆ ಭಾರತದಲ್ಲಿ ಸಂಪ್ರದಾಯಕ ಹಬ್ಬವಾಗಿ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ದೇವಾಲಯಗಳಲ್ಲಿ ದೇವರಿಗೆ ಪೂಜೆ ಪುನಸ್ಕಾರಗಳಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇಂದಿನ ಅಧುನಿಕ ಯುಗದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ವ್ಯಾಮೋಹಕ್ಕೆ ಒಳಗಾಗಿ ನಮ್ಮ ದೇಶದ ಸಂಸ್ಕೃತಿ, ಪರಂಪರೆ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಸಂಪ್ರದಾಯಿಕ ಹಬ್ಬ ಮತ್ತು ಧಾರ್ಮಿಕ ಆಚರಣೆಗಳನ್ನು ಆಚರಿಸುತ್ತಿಲ್ಲ. ನಮ್ಮ ಪೂರ್ವಿಕರು ಹಿಂದಿನಿಂದಲೂ ಆಚರಣೆ ಮಾಡಿಕೊಂಡು ಸಾಂಪ್ರದಾಯಿಕ ಹಬ್ಬ, ಧಾರ್ಮಿಕ ಆಚರಣೆ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದರು.
ದುರ್ಗಾ ಪೂಜೆಯಲ್ಲಿ ಪ್ರತಿಯೊಬ್ಬರೂ ಒಗ್ಗೂಡಿ ಯಾವುದೇ ಅಡೆತಡೆಗಳಿಲ್ಲದೆ ಅದ್ದೂರಿಯಾಗಿ ಆಚರಿಸುವುದು. ಮಕ್ಕಳಲ್ಲಿನ ಪ್ರತಿಭೆಗಳ ಪ್ರದರ್ಶನಕ್ಕೆ ಒಂದು ಉತ್ತಮ ವೇದಿಕೆ ನಿರ್ಮಾಣ ಮಾಡಬೇಕಿದೆ. ತಮ್ಮಲ್ಲಿ ಪ್ರತಿಭೆಗಳಿದ್ದರೂ ಅದನ್ನು ಹೊರ ತರುವುದಕ್ಕೆ ಒಂದು ಉತ್ತಮ ವೇದಿಕೆ ಸಿಗದೆ ಪ್ರತಿಭೆ ನಶಿಸಿಸುತ್ತಿರುತ್ತದೆ ಇಂತವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಕ್ಷೇತ್ರದಲ್ಲಿ ಪ್ರತಿಯೊಂದು ವಾರ್ಡ್ ನಲ್ಲೂ ದುರ್ಗಾ ಪೂಜೆ ಹಮ್ಮಿಕೊಂಡಿದ್ದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆಯುವ ಕೆಲಸ ಮಾಡಲಾಗುತ್ತಿದೆ ಎಂದರು.
ಹಬ್ಬ ಹರಿದಿನಗಳಲ್ಲಿ ತಮ್ಮ ಸುತ್ತಮುತ್ತಲಿನ ವಾತಾವರಣ ಹಾಳುಮಾಡದೆ ಸ್ವಚ್ಛತೆ ಕಾಪಾಡಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ವಿಡಿಎಸ್ ಪ್ರದೀಪ್ ಮತ್ತಿತರರಿದ್ದರು.