ಸುದ್ದಿಮೂಲ ವಾರ್ತೆ ನವದೆಹಲಿ, ಸೆ.24:
ಕೇಂದ್ರೀೀಯ ಶಿಕ್ಷಣ ಮಂಡಳಿ (ಸಿಬಿಎಸ್ಸಿಿ) 10 ಮತ್ತು 12ನೇ ತರಗತಿಯ ಅಂತಿಮ ಪರೀಕ್ಷಾ ದಿನ ಘೋಷಣೆ ಮಾಡಿದೆ.
10 ಮತ್ತು 12ನೇ ತರಗತಿಯ ಪರೀಕ್ಷೆಗಳು 2026ರ ೆಬ್ರವರಿ 17 ಹಾಗೂ ಜುಲೈ 15ರ ನಡುವೆ ನಡೆಯಲಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
10ನೇ ತರಗತಿ ಹಾಗೂ 12ನೇ ತರಗತಿಯ ಪರೀಕ್ಷೆಗಳಿಗೆ 45 ಲಕ್ಷಕ್ಕೂ ಹೆಚ್ಚು ವಿದ್ಯಾಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 204 ವಿವಿಧ ವಿಷಯಗಳಿಗೆ ಭಾರತ ಹಾಗೂ ವಿದೇಶದ 26 ರಾಷ್ಟ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.

