ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ.26: ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಸಖಿ ಮತಗಟ್ಟೆ, ತಿರುಮಣಿ ವಿಶೇಷ ಚೇತನರ ಮತಗಟ್ಟೆ, ಚೆಂಡೂರು ಯತ್ನಿಕ್ ಮತಗಟ್ಟೆ ಹಾಗೂ ಬಿಚಗಾನಹಳ್ಳಿ ಮಾದರಿ ಮತಗಟ್ಟೆಗಳಿಗೆ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಕಾಶ್ ಜಿ. ಟಿ ನಿಟ್ಟಾಲಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮಗೆ ಬೇಕಾದ ಒಳ್ಳೆಯ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಜಿಪಂ ಸಿಇಓ ಕರೆ ನೀಡಿದರು ಮೇ 10 ರಂದು ನಡೆಯುವ ಮತದಾನದಲ್ಲಿ ಎಲ್ಲರು ಭಾಗವಹಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತಗಟ್ಟೆ ಕೇಂದ್ರಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಪಂ ಇಓ ಡಾ ಬಿಂದು ಜಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌಸ್ ಪೀರ್ ಸೆಕ್ಟರ್ ಆಫೀಸರ್ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.