ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ. 25: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಪಶುವೈದ್ಯಕೀಯ ಸಂಘದ ವತಿಯಿಂದ ವಿಶ್ವ ಪಶುವೈದ್ಯರ ದಿನಾಚರಣೆಯ ಅಂಗವಾಗಿ ಏ.28 ರಂದು ಉಚಿತ ರೇಬಿಸ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಆಯಾ ತಾಲ್ಲೂಕು ಪಶು ಆಸ್ಪತ್ರೆಗಳಲ್ಲಿ ಹಾಗೂ ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಾಲಿಕ್ಲಿನಿಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ವಾನ ಮಾಲೀಕರು ನಾಯಿಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕಿಸಬೇಕು ಎಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಮುಖ್ಯಪಶುವೈದ್ಯಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು (ಪಾಲಿಕ್ಲಿನಿಕ್), ಚಿಕ್ಕಬಳ್ಳಾಪುರ ರವರನ್ನು ಸಂರ್ಪಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರ ಮೊಬೈಲ್ ಸಂಖ್ಯೆ: 9980295462, ಬಾಗೇಪಲ್ಲಿ ಮುಖ್ಯ ಪಶುವೈದ್ಯಾಧಿಕಾರಿ ಮೊಬೈಲ್ ಸಂಖ್ಯೆ:9663493696, ಚಿಕ್ಕಬಳ್ಳಾಪುರ ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ:9448661869, ಚಿಂತಾಮಣಿ ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ:9880942692, ಗೌರಿಬಿದನೂರು ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ:9448985667, ಗುಡಿಬಂಡೆ ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ:9880789511, ಶಿಡ್ಲಘಟ್ಟ ಮುಖ್ಯ ಪಶುವೈದ್ಯಾಧಿಕಾರಿಗಳ ಮೊಬೈಲ್ ಸಂಖ್ಯೆ:9448407118 ಗೆ ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ. ಎಂ.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.