ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ.30: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪೆರೇಸಂದ್ರ ಮತ್ತು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮಸ್ತೇನಹಳ್ಳಿ ಇಲ್ಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್-ಲೈನ್ ಮೂಲಕ (ಸೇವಾ ಸಿಂಧು ಪೋರ್ಟಲ್ನಲ್ಲಿ) ಅರ್ಜಿಗಳನ್ನು ಆಹ್ವಾನಿಸಿದೆ.
ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ & ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮೇ 13ರೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಆನ್ ಲೈನ್ ನಲ್ಲಿ Website : https://sevasindhuservices.
ಅರ್ಹತೆ: 5ನೇ ತರಗತಿಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ. ಕ್ರಿಶ್ಚಿಯನ್. ಜೈನ್. ಸಿಖ್. ಬೌದ್ದರು ಮತ್ತು ಪಾರ್ಶಿಯನ್) ವಿದ್ಯಾರ್ಥಿಗಳು ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಚಿಂತಾಮಣಿ ಮೊ:7349008289, 8746882888, ಶಿಡ್ಲಘಟ್ಟ ಮೊ:9739426396, ಗೌರಿಬಿದನೂರು ಮೊ:8309982340 ಚಿಕ್ಕಬಳ್ಳಾಪುರ ಮೊ:7404148343, 7204453320 ಬಾಗೇಪಲ್ಲಿ:8123318947 ಗುಡಿಬಂಡೆ : 9844525406 ಹಾಗೂ ಜಿಲ್ಲಾ ಕಚೇರಿ :08156-277049 ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.