ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಕೆಲವೊಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.
KSRTC ಸೊಸೈಟಿಯಲ್ಲಿ 39 ಹುದ್ದೆಗಳ ನೇಮಕಾತಿಯಲ್ಲಿ ಗೋಲ್ಮಾಲ್ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ಧಿ ಪ್ರಕಟವಾಗಿರುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತಕ್ಕೂ (ಸೊಸೈಟಿಗೂ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್ಆರ್ಟಿಸಿಗೂ) ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವನ್ನು ಸಹಕಾರ ಸಂಘದ ನಿಯಮಾವಳಿ ಅಡಿಯಲ್ಲಿ ನೌಕರರು ನಡೆಸುತ್ತಿದ್ದು, ಈ ಸಂಘದ ವ್ಯವಹಾರಗಳಲ್ಲಿ ಕೆಎಸ್ಆರ್ ಟಿ ಸಿ ಆಡಳಿತ ಮಂಡಳಿಯು ಯಾವುದೇ ರೀತಿಯಲ್ಲೂ ಹಸ್ತಕ್ಷೇಪ ಮಾಡಲು ಅವಕಾಶವಿರುವುದಿಲ್ಲ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಲ್ಲಿ ನೀಡಲಾಗಿರುವ ನೇಮಕಾತಿ ಜಾಹೀರಾತು ಇತರೆ ವ್ಯವಹಾರದ ಕುರಿತು ನಿಗಮಕ್ಕೆ ಯಾವುದೇ ಮಾಹಿತಿ ಇರುವುದಿಲ್ಲ ಆದ್ದರಿಂದ ಆ ಅವ್ಯವಹಾರದ ಕುರಿತು ನಿಗಮಕ್ಕೆ ಯಾವುದೇ ಸಂಬಂಧವಿರುವುದಿಲ್ಲ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.