ಸುದ್ದಿಮೂಲ ವಾರ್ತೆ ಬೆಂಗಳೂರು, ಜ.06:
ವಿದ್ಯುನ್ಮಾಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆೆ ರಾಜ್ಯ ಚುನಾವಣಾ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 3ರ ಕೆಲವು ದಿನಪತ್ರಿಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನರು ವಿಶ್ವಾಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆೆಗಳು ಹಾಗೂ ಗ್ರಾಾಮೀಣ ಸ್ಥಳೀಯ ಸಂಸ್ಥೆೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

